ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಮುಖ್ಯ ಶಿಕ್ಷಕಿ ಮತ್ತು ಪೋಷಕರ ಬಂಧನ

ಸಿಎಎ ವಿರುದ್ಧ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ಮಾಡಿಸಿದ ಆರೋಪದಲ್ಲಿ ಇತ್ತೀಚೆಗೆ ಬೀದರ್ ನ ಶಾಹಿನ್ ಶಿಕ್ಷಣಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ಘಟನೆಗೆ ಸಂಬಂಧಿಸಿ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.

Published: 31st January 2020 01:06 PM  |   Last Updated: 31st January 2020 01:06 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : The New Indian Express

ಬೀದರ್: ಸಿಎಎ ವಿರುದ್ಧ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ಮಾಡಿಸಿದ ಆರೋಪದಲ್ಲಿ ಇತ್ತೀಚೆಗೆ ಬೀದರ್ ನ ಶಾಹಿನ್ ಶಿಕ್ಷಣಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ಘಟನೆಗೆ ಸಂಬಂಧಿಸಿ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.

ಮಕ್ಕಳನ್ನು ಬಳಸಿಕೊಂಡು ಪ್ರಧಾನಿಯನ್ನು ಅವಹೇಳನ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ದೂರು ನೀಡಿದ ನಂತರ ಶಾಲೆಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿಯೊಬ್ಬನ ತಾಯಿ ಮತ್ತು ಮುಖ್ಯ ಶಿಕ್ಷಕಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಶಾಹಿನ್ ಶಿಕ್ಷಣ ಸಂಸ್ಥೆಯ ಮೂಲಗಳು ತಿಳಿಸಿವೆ.

ಫಾರಿದಾ ಬೇಗಂ ಮತ್ತು ನವೀದಾ ಎಂಬುವರನ್ನು ಬಂಧಿಸಲಾಗಿದೆ ಎಂದು ಬೀದರ್ ಎಸ್ ಪಿ ಶ್ರೀಧರ್ ಖಚಿತ ಪಡಿಸಿದ್ದಾರೆ.

ಶಾಹಿನ್ ಶಿಕ್ಷಣ ಸಂಸ್ಥೆಗಳ ಸಮೂಹದ ಕೆಲವು ಬೋಧಕ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ದುರದೃಷ್ಟಕರ ಎಂದು ಪ್ರತಿಪಾದಿಸಿರುವ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖಾದಿರ್, ಬೋಧಕರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp