ನಿತ್ಯಾನಂದ ಸ್ವಾಮಿ ಅತ್ಯಾಚಾರ ಪ್ರಕರಣ ವರ್ಗಾವಣೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಕೋರಿ ದೂರುದಾರ ಕೆ. ಲೆನಿನ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.
ನಿತ್ಯಾನಂದ
ನಿತ್ಯಾನಂದ

ಬೆಂಗಳೂರು: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಕೋರಿ ದೂರುದಾರ ಕೆ. ಲೆನಿನ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.

ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರಾಮನಗರ ಕೋರ್ಟ್ ನಿಂದ ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ಲೆನಿನ್ ಅರ್ಜಿಯಲ್ಲಿ ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ಎ. ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ತೀರ್ಪು ಕಾಯ್ದಿರಿಸಿತು.

ಆರೋಪಿ ನಿತ್ಯಾನಂದ ಸ್ವಾಮೀಜಿ ನಿಯಮ ಉಲ್ಲಂಘಿಸಿ ದೇಶದಿಂದ ಹೊರ ಹೋಗಿದ್ದಾರೆ. ಚಾತುರ್ಮಾಸ್ಯದ ಪೂಜೆ ನೆಪ ಹೇಳಿಕೊಂಡು ಪ್ರಕರಣದ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಆದರೆ, ನ್ಯಾಯಾಲಯ ಅವರ ವಿರುದ್ಧ ಕ್ರಮ ಕೈಗೊಳ್ಳದೆ ದೂರುದಾರ ಲೆನಿನ್ ವಿಚಾರಣೆಗೆ ಹಾಜರಾಗಿಲ್ಲ ಎಂದು ಬಂಧನ ವಾರಂಟ್ ಜಾರಿ ಮಾಡಿದೆ ಎಂದು ಆಕ್ಷೇಪಿಸಿದರು. ಅಲ್ಲದೆ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಮನವಿ ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com