ಮಂಗಳೂರಿನಲ್ಲಿ ಮತ್ತಿಬ್ಬರು ಕೊರೋನಾ ಸೋಂಕಿನಿಂದ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಬೆಳಿಗ್ಗೆ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಬೆಳಿಗ್ಗೆ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಬೆಂಗ್ರೆ ನಿವಾಸಿ 51 ವರ್ಷದ ವ್ಯಕ್ತಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರು ಡಯಾಬಿಟಿಸ್ ಮತ್ತು ನ್ಯುಮೋನಿಯಾ ರೋಗದಿಂದ ಬಳಲುತ್ತಿದ್ದರು. ಅವರನ್ನು ಕೊರೋನಾ ಪರೀಕ್ಷಿಸಿದಾಗ ಪಾಸಿಟಿವ್ ಬಂದಿತ್ತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಅಂತೆಯೇ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 31 ವರ್ಷದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಯುವಕನ ಸಾವಿನ ಬಳಿಕ ಕೊರೊನಾ ಟೆಸ್ಟ್ ಮಾಡಿದ್ದು, ಅದರಲ್ಲಿ ಆತನಿಗೆ ಸೋಂಕು ದೃಢಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com