ಮಲ್ಲೇಶ್ವರಂ ಮಾರ್ಕೆಟ್ ಸ್ವಯಂ ಲಾಕ್ ಡೌನ್ ಮಾಡಲು 200 ವ್ಯಾಪಾರಿಗಳು ಮುಂದು!

ಕೊರೊನಾ ಕಾಟಕ್ಕೆ ಬೆಂಗಳೂರು ನಲುಗಿ ಹೋಗಿದ್ದು ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ ಎಂದು ಬೆಂಗಳೂರಿನ ಮಲ್ಲೇಶ್ವರಂ ಮಾರುಕಟ್ಟೆ ವ್ಯಾಪಾರಿಗಳು ನಿರ್ಧರಿಸಿದ್ದಾರೆ.
ಮಲ್ಲೇಶ್ವರಂ ಮಾರ್ಕೆಟ್
ಮಲ್ಲೇಶ್ವರಂ ಮಾರ್ಕೆಟ್

ಬೆಂಗಳೂರು: ಕೊರೊನಾ ಕಾಟಕ್ಕೆ ಬೆಂಗಳೂರು ನಲುಗಿ ಹೋಗಿದ್ದು ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ ಎಂದು ಬೆಂಗಳೂರಿನ ಮಲ್ಲೇಶ್ವರಂ ಮಾರುಕಟ್ಟೆ ವ್ಯಾಪಾರಿಗಳು ನಿರ್ಧರಿಸಿದ್ದಾರೆ.

ಲಾಕ್‍ಡೌನ್ ಸಮಯದಲ್ಲಿ ದಿನಕ್ಕೆ ನಾಲ್ಕೈದು ಪ್ರಕರಣಗಳು ಬರುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಲಾಕ್‍ಡೌನ್ ಸಡಿಲಿಕೆ ಬಳಿಕ ಸೆಂಚುರಿ ಮೇಲೆ ಸೆಂಚುರಿ ಬಾರಿಸಿದ್ದ ಕೊರೊನಾ ಈಗ ದಿನಕ್ಕೆ 800ರ ಬಳಿ ಬಂದಿದೆ. ಹೀಗೆ ಹೋದರೆ ಬೆಂಗಳೂರು ಮತ್ತೊಂದು ಮುಂಬೈ ನಗರ ಆಗುವುದರಲ್ಲಿ ಅನುಮಾನವೇ ಇಲ್ಲ. ಇದಕ್ಕೆ ಕಡಿವಾಣ ಹಾಕಲು ಬೆಂಗಳೂರಿನ ವರ್ತಕರು ಮುಂದಾಗಿದ್ದಾರೆ.
 
ಬಸವನಗುಡಿಯ ವರ್ತಕರ ಸಂಘದವರು ಮಂಗಳವಾರದಿಂದ ಜುಲೈ 6 ರವರೆಗೆ ಒಂದು ವಾರಗಳ ಕಾಲ ಸ್ವಯಂ ಲಾಕ್‍ಡೌನ್ ಮಾಡಿದ್ದಾರೆ. ಈಗ ಮಲ್ಲೇಶ್ವರಂ ವರ್ತಕರು ಲಾಕ್‍ಡೌನ್ ಮಾಡಲು ಮುಂದಾಗಿದ್ದಾರೆ. ಇಂದಿನಿಂದ ಜುಲೈ 7 ರವೆಗೆ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುವುದಕ್ಕೆ ನಿರ್ಧಾರ ಮಾಡಿಕೊಂಡಿದ್ದಾರೆ.

ಈಗಾಗಲೇ ಕೆ.ಆರ್.ಮಾರುಕಟ್ಟೆ, ಚಿಕ್ಕಪೇಟೆ, ಸೇರಿದಂತೆ ಅನೇಕ ಕಡೆ ವರ್ತಕರು ಸ್ವಯಂ ಲಾಕ್‍ಡೌನ್ ಮಾಡಿಕೊಂಡಿದ್ದಾರೆ. ಇದೇ ಮಾರ್ಗದಲ್ಲಿ ಬನಶಂಕರಿ, ಕೆ.ಆರ್ ಪುರಂ, ಯಶವಂತಪುರ, ಕಮರ್ಷಿಯಲ್ ಸ್ಟ್ರೀಟ್ ಜಯನಗರದ ವರ್ತಕರು ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುವ ಸಾಧ್ಯತೆ ಇದೆ.

ಮಲ್ಲೇಶ್ವರಂ ಮಾರುಕಟ್ಟೆಯಲ್ಲಿ  ಸುಮಾರು 50 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 40 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು 12 ಮಂದಿ ಇದುವರೆಗೂ ಡಿಸ್ಚಾರ್ಜ್ ಆಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com