ಮಾಸ್ಕ್‌ ಧರಿಸದ, ಸಾಮಾಜಿಕ ಅಂತರ ಕಾಪಾಡಿಕೊಳ್ಳದವರಿಂದ ಒಂದೇ ತಿಂಗಳಲ್ಲಿ 57.39 ಲಕ್ಷ ರೂ. ದಂಡ ಸಂಗ್ರಹ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಜನರಿಂದ ಜೂನ್ ತಿಂಗಳಲ್ಲಿ ಒಟ್ಟು 57.39 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ.
ದಂಡ ಕಟ್ಟಿಸಿಕೊಳ್ಳುತ್ತಿರುವ ಚಿತ್ರ
ದಂಡ ಕಟ್ಟಿಸಿಕೊಳ್ಳುತ್ತಿರುವ ಚಿತ್ರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಜನರಿಂದ ಜೂನ್ ತಿಂಗಳಲ್ಲಿ ಒಟ್ಟು 57.39 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ.

ಮಾರ್ಷಲ್‌ಗಳು ಹಾಗೂ ಪೊಲೀಸ್ ಅಧಿಕಾರಿಗಳು ನಗರದ ಎಲ್ಲಾ 198 ವಾರ್ಡ್‌ಗಳ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದ 27,421 ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ 1,267 ಮಂದಿ ಸೇರಿದಂತೆ 28,688 ಮಂದಿಯಿಂದ ಒಟ್ಟು 57.39 ಲಕ್ಷ ರೂ. ದಂಡ ಸಂಗ್ರಹ ಮಾಡಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಜೊತೆಗೆ, ವಿವಿಧೆಡೆ 98 ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ಪ್ರಕಟಣೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕೊರೋನಾ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದ್ದು ಸರ್ಕಾರ ಮತ್ತೆ ಲಾಕ್ ಡೌನ್ ಮಾಡುವ ಚಿಂತನೆ ನಡೆಸಿದೆ. ಇದರ ಮಧ್ಯೆ ಮಾಸ್ಕ್ ಧರಿಸಿದೆ, ಅಂತರ ಕಾಪಾಡಿಕೊಳ್ಳದವರಿಗೂ ದಂಡದ ರೂಪದಲ್ಲಿ ಬಿಸಿ ಮುಟ್ಟಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com