ಎಲ್ಲಾ ಜಿಲ್ಲೆಗಳಲ್ಲಿ ಪ್ಲಾಸ್ಮಾ, ಟೆಲಿಮೆಡಿಸನ್ ಚಿಕಿತ್ಸೆಗೆ ಕ್ರಮ: ಶ್ರೀರಾಮುಲು

ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಪ್ಲಾಸ್ಮಾ ಚಿಕಿತ್ಸೆ ನೀಡಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. 
ಶ್ರೀರಾಮುಲು
ಶ್ರೀರಾಮುಲು

ಬೆಂಗಳೂರು: ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಪ್ಲಾಸ್ಮಾ ಚಿಕಿತ್ಸೆ ನೀಡಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. 

ನಗರದ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಸಿಸ್ಕೋ ಸಂಸ್ಥೆಯಿಂದ ಅಭಿವೃದ್ಧಿಪಡಿಸಿದ ಟೆಲಿ ಮೆಡಿಸನ್ ವ್ಯವಸ್ಥೆಯ ಟೆಲಿಕಾರ್ಡ್‌ಗೆ ರಿಮೊಟ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಪ್ಲಾಸ್ಮಾ ಚಿಕಿತ್ಸೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬಳಸಲು ಉದ್ದೇಶಿಸಲಾಗಿದೆ. ರಾಜ್ಯದಲ್ಲಿ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿಯಾಗಿದೆ ಎಂದರು. 

ಸೋಂಕಿತರಿಗೆ ಎಲ್ಲೆಡೆ ಚಿಕಿತ್ಸೆ ನೀಡುವ ಉದ್ದೇಶದಿಂದ ಅತ್ಯಾಧುನಿಕ ಟೆಲಿ ಮೆಡಿಸನ್‌ಗೆ ಆದ್ಯತೆ ನೀಡಲಾಗುತ್ತಿದೆ. ಟೆಲಿ ಮೆಡಿಸನ್ ವ್ಯವಸ್ಥೆಯಿಂದ ವೈದ್ಯರು ದೂರದ ಪ್ರದೇಶಗಳಲ್ಲಿರುವವರಿಗೆ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ. ಜತೆಗೆ ವಯದ್ಯರು ಕೊರೋನಾ ಸೋಂಕಿನಿಂದಲು ದೂರ ಇರಬಹುದು ಎಂದು ಹೇಳಿದರು.
 
ಹೀಗಾಗಿ ಎಲ್ಲಾ ಆಸ್ಪತ್ರೆಗಳಲ್ಲೂ ಟೆಲಿ ಮೆಡಿಸನ್ ಸೇವೆಗೆ ಆದ್ಯತೆ ನೀಡಲಾಗುವುದು, ಬೆಂಗಳೂರಿನಲ್ಲಿ ವಿಕ್ಟೋರಿಯಾ ಮತ್ತು ಕೆ.ಸಿ.ಜನರಲ್ ಆಸ್ಪತ್ರೆಗಳಲ್ಲಿ ಮಾತ್ರ ಈ ವ್ಯವಸ್ಥೆ ಜಾರಿಯಲ್ಲಿದ್ದು, ಟೆಲಿಮೆಡಿಸನ್ ಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದರು. ಯಾದಗಿರಿಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯೊಬ್ಬರ ಪಾರ್ಥಿವ ಶರೀರವನ್ನು ದರದರನೇ ಎಳೆದು ಅಂತ್ಯಸಂಸ್ಕಾರ ಮಾಡಿದ ಅಮಾನವೀಯ ಘಟನೆ ವರದಿಯಾಗಿದ್ದು, ಹೀಗೆ ದುರ್ವರ್ತನೆಯಿಂದ ಅಂತ್ಯಸಂಸ್ಕಾರ ಮಾಡಿದ ವ್ಯಕ್ತಿಗೆ ನೋಟಿಸ್ ನೀಡಲಾಗಿದೆ. ಬಳ್ಳಾರಿಯಲ್ಲಿ ಇದೇ ರೀತಿ ಅಮಾನವೀಯವಾಗಿ ವರ್ತಿಸಿದವರನ್ನು ಅಮಾನತು ಮಾಡಲಾಗಿದೆ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com