ಕೊರೋನಾ ಸೋಂಕಿತ ಗರ್ಭಿಣಿಗೆ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ

ಕೊರೋನಾ ಸೋಂಕಿತ ಗರ್ಭಿಣಿಗೆ ಮಂಡ್ಯದ ಜಿಲ್ಲಾಸ್ಪತ್ರೆಯಲ್ಲಿ  ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿದೆ.ಡಾ. ಯೋಗೇಂದ್ರ ಕುಮಾರ್ ನೇತೃತ್ವದ ವೈದ್ಯರ ತಂಡ ಕೊರೋನಾ ವೈರಸ್ ಸೋಂಕಿತ ಮಳವಳ್ಳಿಮೂಲದ ಗರ್ಭಿಣಿ ಮಹಿಳೆಗೆ ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿ ಮಗುವನ್ನು ಹೊರತೆಗೆಯಲಾಗಿದೆ. 
ವೈದ್ಯರ ತಂಡ
ವೈದ್ಯರ ತಂಡ

ಮಂಡ್ಯ: ಕೊರೋನಾ ಸೋಂಕಿತ ಗರ್ಭಿಣಿಗೆ ಮಂಡ್ಯದ ಜಿಲ್ಲಾಸ್ಪತ್ರೆಯಲ್ಲಿ  ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿದೆ.
ಡಾ.ಯೋಗೇಂದ್ರ ಕುಮಾರ್ ನೇತೃತ್ವದ ವೈದ್ಯರ ತಂಡ ಕೊರೋನಾ ವೈರಸ್ ಸೋಂಕಿತ ಮಳವಳ್ಳಿ ಮೂಲದ ಗರ್ಭಿಣಿಗೆ  ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿ ಮಗುವನ್ನು ಹೊರತೆಗೆಯಲಾಗಿದೆ.

 ಈಗ ಮಗುವಿನ ಆರೋಗ್ಯ ಚೆನ್ನಾಗಿದೆ. ಇನ್ನೆರಡು ದಿನದಲ್ಲಿ ಮಗುವಿಗೆ ಕೂಡ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.ಈಗಾಗಲೇ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಸುಮಾರು ೪೦೦ಕ್ಕೂ ಅಧಿಕ ಕೋವಿಡ್ ಸೋಂಕಿತರಿದ್ದು, ಅದರಲ್ಲಿ ಗರ್ಭಿಣಿ ಮಹಿಳೆಗೆ ಸೋಂಕು ತಗುಲಿರುವುದು ಮೊದಲ ಪ್ರಕರಣವಾಗಿತ್ತು. 

ಇದರಿಂದ ವೈದ್ಯರಲ್ಲಿ ಸಹಜವಾಗಿ ಆತಂಕ ಮೂಡಿತ್ತು. ಆದರೆ ಇದೀಗ ಇದೀಗ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದ್ದು, ವೈದ್ಯರ ಕಾರ್ಯಕ್ಕೆ ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.ಶಸ್ತ್ರ ಚಿಕಿತ್ಸೆ ಯಶ್ವಸಿ ಬಳಿಕ ವೈದ್ಯರು ಮತ್ತು ಮಗುವಿನ ಕುಟುಂಬಸ್ಥರ ಮುಖದಲ್ಲಿ ಮಂದಹಾಸ ಮೂಡಿತ್ತು.

ವರದಿ: ನಾಗಯ್ಯ
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com