ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೋ ಅಲರ್ಟ್' ಘೋಷಣೆ: ಭಾರೀ ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 2, 4 ಮತ್ತು 5 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಭಾರತೀಯ ಹವಾಮಾನ ಇಲಾಖೆ  ಯೆಲ್ಲೋ ಅಲರ್ಟ್ ಘೋಷಿಸಿದೆ.
ಸಿಎಸ್ ಪಾಟೀಲ್
ಸಿಎಸ್ ಪಾಟೀಲ್

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 2, 4 ಮತ್ತು 5 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಭಾರತೀಯ ಹವಾಮಾನ ಇಲಾಖೆ  ಯೆಲ್ಲೋ ಅಲರ್ಟ್ ಘೋಷಿಸಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ. ಎಸ್ ಪಾಟೀಲ್ ಈ ವಿಷಯವನ್ನು ತಿಳಿಸಿದ್ದು,
 ನಾಳೆ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಸಾಧಾರಾಣ ಮಳೆಯಾಗುವ ಸಾಧ್ಯತೆ ಇರುವುದಾಗಿ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com