ಕೋವಿಡ್ 19 ನಿರ್ವಹಣೆಯ ಕರ್ತವ್ಯಕ್ಕೆ ಹಾಜರಾಗದಿದ್ದರೆ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ಸಿಎಂ ಯಡಿಯೂರಪ್ಪ

ಕೋವಿಡ್ 19 ನಿರ್ವಹಣೆಯ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ತೋರಿಸಿದರೆ ಈ ಕಠಿಣ ಪರಿಸ್ಥಿತಿಯಲ್ಲಿ ಕಷ್ಟವಾಗುತ್ತದೆ. ಕೆಲವು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದಿರುವುದು ಗಮನಕ್ಕೆ ಬಂದಿದ್ದು ಅವರ ವಿರುದ್ಧ ಈಗಾಗಲೇ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್ 19 ನಿರ್ವಹಣೆಯ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ತೋರಿಸಿದರೆ ಈ ಕಠಿಣ ಪರಿಸ್ಥಿತಿಯಲ್ಲಿ ಕಷ್ಟವಾಗುತ್ತದೆ. ಕೆಲವು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದಿರುವುದು ಗಮನಕ್ಕೆ ಬಂದಿದ್ದು ಅವರ ವಿರುದ್ಧ ಈಗಾಗಲೇ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಹೆಚ್ಚಿನ ಮಾನವ ಸಂಪನ್ಮೂಲದ ಅಗತ್ಯವಿದೆ. ಎಲ್ಲರೂ ತಮ್ಮ ತಮ್ಮ ಜವಾಬ್ದಾರಿಗಳನ್ನು ಸೂಕ್ತವಾಗಿ ನಿರ್ವಹಿಸಬೇಕಾಗಿದೆ, ಹಾಗಾದರೆ ಮಾತ್ರ ಸೋಂಕಿನ ವಿರುದ್ಧ ಹೋರಾಡಿ ಜಯಿಸಲು ಸಾಧ್ಯ. ಈ ಸಮಯದಲ್ಲಿ ಕರ್ತವ್ಯಕ್ಕೆ ಹಾಜರಾಗದಿದ್ದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com