ವೇತನ ಹೆಚ್ಚಿಸಿದರೂ ಬಗ್ಗದ ಗುತ್ತಿಗೆ ವೈದ್ಯರು: ಸೇವಾ ಭದ್ರತೆಗೆ ಆಗ್ರಹ

ಸೇವಾ ಭದ್ರತೆಗೆ ಆಗ್ರಹಿಸಿ ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದ ರಾಜ್ಯ ಸರ್ಕಾರಿ ಆಸ್ಪತ್ರೆಗಳ ಗುತ್ತಿಗೆ ವೈದ್ಯರ ಮಾಸಿಕ ವೇತನವನ್ನು ರೂ.45 ದಿಂದ 60 ಸಾವಿರಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸೇವಾ ಭದ್ರತೆಗೆ ಆಗ್ರಹಿಸಿ ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದ ರಾಜ್ಯ ಸರ್ಕಾರಿ ಆಸ್ಪತ್ರೆಗಳ ಗುತ್ತಿಗೆ ವೈದ್ಯರ ಮಾಸಿಕ ವೇತನವನ್ನು ರೂ. 45 ದಿಂದ 60 ಸಾವಿರಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರು. ವೇತ ಹೆಚ್ಚಳಕ್ಕೆ ಸಮಾಧಾನಗೊಳ್ಳದ ವೈದ್ಯರು ಸಾಮೂಹಿಕ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯಲು ನಕಾರ ವ್ಯಕ್ತಪಡಿಸಿದ್ದಾರೆ. 

ತಮ್ಮ ಸೇವೆಯನ್ನು ಕಾಯಂಗೊಳಿಸದಿದ್ದರೆ ಜು.8ರಿಂದ ಸೇವೆಗೆ ಹಾಜರಾಗುವುದಿಲ್ಲ ಎಂದು ಗುತ್ತಿಗೆ ವೈದ್ಯರು ಪಟ್ಟಿ ಹಿಡಿದಿದ್ದಾರೆ. 

ರಾಜ್ಯದ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರ, ನಗರ ಪಾಲಿಕೆ ವ್ಯಾಪ್ತಿ ಮತ್ತು ಗ್ರಾಮೀಣ ಭಾಗಗಳ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದಲ್ಲಿ 504 ಎಂಬಿಬಿಎಸ್/ಎಂಡಿಎಸ್ ವೈದ್ಯರು ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಮಾಸಿಕ ರೂ.45 ಸಾವಿರ ವೇತನವಿದೆ. ಅದನ್ನು ಏಕರೂಪದಲ್ಲಿ ರೂ.60 ಸಾವಿರಕ್ಕೆ ಹೆಚ್ಚಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ವೇತನ ಹೆಚ್ಚಳಕ್ಕೆ ಸಲ್ಲಿಸಿದ್ದ ಪ್ರಸ್ತಾವನೆ ಆಧರಿಸಿ ಸರ್ಕಾರ ಈ ಆದೇಶ ಮಾಡಿದೆ. ಆದರೆ, ಗುತ್ತಿಗೆ ವೈದ್ಯರ ಸೇವೆಯನ್ನು ಕಾಯಂಗೊಳಿಸಬೇಕೆಂಬ ಬೇಡಿಕೆಗೆ ಆಸ್ಪದ ನೀಡುವಂತಿಲ್ಲ ಎಂಬ ಷರತ್ತು ವಿಧಿಸಿ ಸರ್ಕಾರ ಈ ಆದೇಶ ಹೊರಡಿಸಿದೆ. 

ವೇತನ ಹೆಚ್ಚಳಕ್ಕೆ ಸಮಾಧಾನಗೊಳ್ಳದ ಗುತ್ತಿಗೆ ವೈದ್ಯರು, ನಾವು ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಾ ಬರುತ್ತಿದ್ದೇವೆ. ಸೇವೆ ಕಾಯಮಾತಿಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಇಂದಿನ ಕೊರೋನಾ ಸಂಕಷ್ಟದ ಕಾಲದಲ್ಲಾದರೂ ನಮಗೆ ಸೇವಾ ಭದ್ರತೆ ಒದಗಿಸಬೇಕೆಂಬುದು ನಮ್ಮ ಬೇಡಿಕೆಯಾಗಿದೆ. ನಮ್ಮ ಬೇಡಿಕೆ ಈಡೇರದ ಹೊರತು ನಾವು ನಮ್ಮ ಸಾಮೂಹಿಕ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ಜು.8ರಿಂದ ಸೇವೆಗೆ ಹಾಜರಾಗುವುದಿಲ್ಲ ಎಂದು ಪಟ್ಟು ಮುಂದುರೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com