ಎಸ್ಎಸ್ಎಲ್'ಸಿ ಕೊನೆಯ ಪರೀಕ್ಷೆ: ಪರೀಕ್ಷಾ ಕೇಂದ್ರಕ್ಕೆ ಭೇಟಿ, ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್

ಸಾಕಷ್ಟು ಆತಂಕ, ಭಯದಿಂದ ಆರಂಭವಾದ ಎಸ್ಎಸ್ಎಲ್'ಸಿ ಪರೀಕ್ಷೆ ಸುಸೂತ್ರವಾಗಿ ನಡೆದು ಅಂತಿಮ ಘಟ್ಟಕ್ಕೆ ಬಂದಿದ್ದು, ಶುಕ್ರವಾರ ನಡೆಯಲಿರುವ ತೃತೀಯ ಭಾಷಾ ಪರೀಕ್ಷೆ ಕೊನೆಯದ್ದಾಗಿದೆ.
ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತಿರುವ ಸುರೇಶ್ ಕುಮಾರ್
ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತಿರುವ ಸುರೇಶ್ ಕುಮಾರ್

ಬೆಂಗಳೂರು: ಸಾಕಷ್ಟು ಆತಂಕ, ಭಯದಿಂದ ಆರಂಭವಾದ ಎಸ್ಎಸ್ಎಲ್'ಸಿ ಪರೀಕ್ಷೆ ಸುಸೂತ್ರವಾಗಿ ನಡೆದು ಅಂತಿಮ ಘಟ್ಟಕ್ಕೆ ಬಂದಿದ್ದು, ಶುಕ್ರವಾರ ನಡೆಯಲಿರುವ ತೃತೀಯ ಭಾಷಾ ಪರೀಕ್ಷೆ ಕೊನೆಯದ್ದಾಗಿದೆ. ಈ ನಡುವೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಅನೇಕಲ್ ಎಸ್ಎಸ್ಎಲ್'ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಅನೇಕಲ್'ನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸುರಕ್ಷೆ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಪರೀಕ್ಷಾ ಕೇಂದ್ರದಲ್ಲಿದ್ದ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.

ಎಸ್ಎಸ್ಎಲ್'ಸಿಯ ಕನ್ನಡ, ಇಂಗ್ಲೀಷ್, ಗಣಿತ ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳು ಮುಕ್ತಾವಾಗಿದ್ದು, ಇಂದು ನಡೆಯಲಿರುವ ತೃತೀಯ ಭಾಷೆ ಹಿಂದಿ ಪರೀಕ್ಷೆಗೆ ಅಂದಾಜು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com