ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ​ ಪ್ರೋತ್ಸಾಹ ಧನ ವಿತರಣೆ: ಸಚಿವ ಎಸ್.ಟಿ. ಸೋಮಶೇಖರ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1271 ಮಂದಿ ಆಶಾ ಕಾರ್ಯಕರ್ತೆಯರಿದ್ದಾರೆ. ಅವರಿಗೆ ಸಹಕಾರ ಇಲಾಖೆಯಿಂದ ತಲಾ 3 ಸಾವಿರ ಪ್ರೋತ್ಸಾಹಧನವನ್ನು ನೀಡುವ ನಿಟ್ಟಿನಲ್ಲಿ ಖುದ್ದು ನಾನೇ ಜಿಲ್ಲೆಗೆ ಬಂದಿದ್ದೇನೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಸಚಿವ ಎಸ್ ಟಿ ಸೋಮಶೇಖರ್
ಸಚಿವ ಎಸ್ ಟಿ ಸೋಮಶೇಖರ್

ಮಂಗಳೂರು: ಏಪ್ರಿಲ್ 1 ರಿಂದ ಜುಲೈ 2 ರವರೆಗೆ 6,30,000 ರೈತರಿಗೆ 4427 ಕೋಟಿ ರೂಪಾಯಿ ಬೆಳೆ ಸಾಲ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 14500 ಕೋಟಿ ರೂಪಾಯಿ ಬೆಳೆ ಸಾಲ ಕೊಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್ಎಸ್ಎಲ್ ಸಿ ಪರೀಕ್ಷೆಯಾದ ಮೇಲೆ ಸಂಪೂರ್ಣ ಲಾಕ್ ಡೌನ್ ಮಾಡಬಾರದು ಎಂಬುದು ಸರ್ಕಾರದ ತೀರ್ಮಾನ. ಆದರೆ, ಪರಿಸ್ಥಿತಿ ಕೈಮೀರಿದ ಕಡೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು, ಮಾಸ್ಕ್ ಧರಿಸಲು ಕ್ರಮ ಕೈಗೊಳ್ಳುವ ಕಾರ್ಯಕ್ರಮಗಳನ್ನು ಮಾಡಲಾಗುವುದು. ಇನ್ನು ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಕ್ರಮ ತೆಗೆದುಕೊಳ್ಳುವ ಅಧಿಕಾರ ಕೊಡಲಾಗಿದೆ ಎಂದು ಹೇಳಿದರು.

ಶೀಘ್ರ ಎಲ್ಲ ಆಶಾ ಕಾರ್ಯಕರ್ತೆಯರಿಗೂ ತಲಾ 3 ಸಾವಿರ ​ ಪ್ರೋತ್ಸಾಹಧನ ವಿತರಣೆ
ದಕ್ಷಿಣಕನ್ನಡ ಜಿಲ್ಲೆಯಲ್ಲಿ 1271 ಮಂದಿ ಆಶಾ ಕಾರ್ಯಕರ್ತೆಯರಿದ್ದಾರೆ. ಅವರಿಗೆ ಸಹಕಾರ ಇಲಾಖೆಯಿಂದ ತಲಾ 3 ಸಾವಿರ ಪ್ರೋತ್ಸಾಹಧನವನ್ನು ನೀಡುವ ನಿಟ್ಟಿನಲ್ಲಿ ಖುದ್ದು ನಾನೇ ಜಿಲ್ಲೆಗೆ ಬಂದಿದ್ದೇನೆ. ರಾಜ್ಯದಲ್ಲಿ 42 ಸಾವಿರ ಆಶಾ ಕಾರ್ಯಕರ್ತೆಯರಿದ್ದು, ಈವರೆಗೆ 21 ಸಾವಿರ ಆಶಾ ಕಾರ್ಯಕರ್ತೆಯರಿಗೆ ಸಾಲ ವಿತರಣೆ ಮಾಡಲಾಗಿದೆ. ಶೀಘ್ರದಲ್ಲೇ ಎಲ್ಲರಿಗೂ ವಿತರಣೆಯಾಗಲಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

ಜಿಲ್ಲಾ ಪ್ರಗತಿ ಪರಿಶೀಲನೆ
ಮತ್ತೆ ಪ್ರತಿ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ಸಭೆ ನಡೆಸಿ ಪ್ರಗತಿ ಪರಿಶೀಲನೆ ಮಾಡುತ್ತೇನೆ. ಅಲ್ಲಿ ರೈತರಿಗೆ ಎಷ್ಟು ಸಾಲ ವಿತರಣೆಯಾಗಿದೆ? ಹೊಸ ರೈತರಿಗೆ ಸಾಲ ಸಿಕ್ಕಿದೆಯೇ? ಬಡವರ ಬಂಧು, ಕಾಯಕ ಯೋಜನೆಗಳಡಿ ಎಷ್ಟು ಸಾಲ ವಿತರಣೆಯಾಗಿದೆ ಎಂಬ ಬಗ್ಗೆ ಮಾಹಿತಿ ಪಡೆಯುತ್ತೇನೆ.ನಾನು ಯಾವ ಜಿಲ್ಲೆಗೆ ಮೊದಲು ಭೇಟಿ ನೀಡುತ್ತೇನೆಯೋ ಅಲ್ಲಿ ಮೊದಲು ಪಕ್ಷದ ಅಧ್ಯಕ್ಷರಿಗೆ ಮಾಹಿತಿ ನೀಡುತ್ತೇನೆ. ಬಳಿಕ ಪಕ್ಷದ ಕಚೇರಿಗೆ ಭೇಟಿ ನೀಡಿ ಮುಖಂಡರು ಹಾಗೂ ಪದಾಧಿಕಾರಿಗಳ ಜೊತೆ ಸಭೆ ನಡೆಸುವ ಪರಿಪಾಠವನ್ನು ಬೆಳೆಸಿಕೊಂಡಿದ್ದೇನೆ ಎಂದು ಸಚಿವರು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ 14500 ಕೋಟಿ ರೂಪಾಯಿ ಬೆಳೆ ಸಾಲ ಗುರಿ
ಏಪ್ರಿಲ್ 1 ರಿಂದ ಜುಲೈ 2 ರವರೆಗೆ 6,30,000 ರೈತರಿಗೆ 4427 ಕೋಟಿ ರೂಪಾಯಿ ಬೆಳೆ ಸಾಲ ಕೊಟ್ಟಿದ್ದೇವೆ. ಪ್ರಸಕ್ತ ಸಾಲಿನಲ್ಲಿ 14500 ಕೋಟಿ ರೂಪಾಯಿ ಬೆಳೆ ಸಾಲ ಕೊಡುವ ಗುರಿ ಹಾಕಿಕೊಳ್ಳಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ಸಭೆ ನಡೆಸಿ ಪ್ರಗತಿ ಪರಿಶೀಲನೆ ಮಾಡುತ್ತೇನೆ. ಅಲ್ಲಿ ರೈತರಿಗೆ ಎಷ್ಟು ಸಾಲ ವಿತರಣೆಯಾಗಿದೆ? ಹೊಸ ರೈತರಿಗೆ ಸಾಲ ಸಿಕ್ಕಿದೆಯೇ? ಬಡವರ ಬಂಧು, ಕಾಯಕ ಯೋಜನೆಗಳಡಿ ಎಷ್ಟು ಸಾಲ ವಿತರಣೆಯಾಗಿದೆ ಎಂಬ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಸೋಮಶೇಖರ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com