ಎಂಎಲ್‍ಸಿ ಪುಟ್ಟಣ್ಣಗೆ ಕೊರೊನಾ ಪಾಸಿಟಿವ್

ಎಂಎಲ್‍ಸಿ ಪುಟ್ಟಣ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.
ಎಂಎಲ್‍ಸಿ ಪುಟ್ಟಣ್ಣ
ಎಂಎಲ್‍ಸಿ ಪುಟ್ಟಣ್ಣ

ಬೆಂಗಳೂರು: ಎಂಎಲ್‍ಸಿ ಪುಟ್ಟಣ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸ್ವತಃ ಎಂಎಲ್ ಸಿ ಪುಟ್ಟಣ್ಣ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ನನ್ನ ಕೊರೋನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು, ನಿಮ್ಮ ಆಶೀರ್ವಾದದಿಂದ ಬೇಗ ಗುಣಮಖನಾಗಿ ಬರುತ್ತೇನೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. 

'ಕಳೆದ ನಾಲ್ಕು ದಿನಗಳಿಂದ ಜ್ವರ ಇದ್ದುದರಿಂದ, ಕ್ವಾರಂಟೈನ್ ನಲ್ಲಿ ಇದ್ದೆ. ಗುರುವಾರ ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ತಪಾಸಣೆಯ ವರದಿ ಪಾಸಿಟಿವ್ ಬಂದಿರುವುದರಿಂದ ಶುಕ್ರವಾರ ಅಂದರೆ ನಿನ್ನೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದೇವರ ದಯೆ ಹಾಗೂ ನಿಮ್ಮ ಆಶೀರ್ವಾದದಿಂದ ಬೇಗ ಗುಣಮುಖನಾಗಿ ಬರುತ್ತೆನೆ ಎಂದು ನಂಬಿದ್ದೇನೆ. ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ನೀವು ಮತ್ತು ನಿಮ್ಮ ಕುಟುಂಬದವರು ಸುರಕ್ಷಿತವಾಗಿರಿ ಎಂದು ಪುಟ್ಟಣ್ಣ ಮನವಿ ಮಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com