ಕೊರೋನಾಗೆ ಹೆದರಿ ವ್ಯಕ್ತಿ ನೇಣಿಗೆ ಶರಣು.!  

Published: 05th July 2020 01:02 AM  |   Last Updated: 05th July 2020 01:08 AM   |  A+A-


Casual_Image1

ಸಾಂದರ್ಭಿಕ ಚಿತ್ರ

Posted By : Nagaraja AB
Source : RC Network

ಮಂಡ್ಯ: ಕೊರೋನಾ ಸೋಂಕು ತಗುಲಿರುವ ಆತಂಕದಿಂದ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಮಾರ್ನಾಮಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದೊಡ್ಡ ನೀಲ ಹೆಗಡೆ (೬೧) ಎಂಬಾತನೇ ಕೊರೋನಾ ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. 

ಹಿನ್ನೆಲೆ; ಕೊರೋನಾ ಸೋಂಕು ದೃಢಪಟ್ಟ ವ್ಯಕ್ತಿಯೊಬ್ಬರೂ ಹೆಗಡೆ ಮನೆಗೆ ಬಂದಿದ್ದರೆನ್ನಲಾಗಿದ್ದು ಅವರನ್ನು ಈಗಾಗಲೇ ಕೋವಿಡ್ ಆಸ್ಪತ್ರೆಯಲ್ಲಿ ಐಸೋಲೇಷನ್ ನಲ್ಲಿ ಇಡಲಾಗಿದೆ. ಇದರಿಂದ ಭಯಪಟ್ಟ ಹೆಗಡೆ ಅವರು ಬೆಳಗ್ಗೆ ೧೧.೩೦ರ ಸಮಯಲ್ಲಿ ತಮ್ಮ ಜಮೀನಿನಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಮರದಿಂದ ಶವವನ್ನು ಇಳಿಸಿ, ಆಂಬ್ಯುಲೆಸ್ಸ್ ವಾಹನದಲ್ಲಿ ಕೋವಿಡ್ ಆಸ್ಪತ್ರೆಯ ಶವಾಗಾರಕ್ಕೆ ತಂದು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದಾರೆ.

ಈ ಸಂಬಂಧ ಬೆಸಗರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂದಿನ ಕ್ರಮ ಕೈಗೊಂಡಿದ್ದಾರೆ.

ವರದಿ:ನಾಗಯ್ಯ

Stay up to date on all the latest ರಾಜ್ಯ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp