ಲಾಕ್'ಡೌನ್ ಸಂಕಷ್ಟದ ವೇಳೆ ವಲಸಿಗರಿಗೆ ಸಹಾಯಹಸ್ತ: ರಾಜ್ಯ ಬಿಜೆಪಿ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ

ಕೊರೋನಾ ವೈರಸ್ ಲಾಕ್'ಡೌನ್ ಸಂದರ್ಭದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಉತ್ತಮ ಕಾರ್ಯ ನಿರ್ವಹಣೆ ಮಾಡಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.

Published: 05th July 2020 09:25 AM  |   Last Updated: 05th July 2020 09:25 AM   |  A+A-


Chief Minister B S Yediyurappa with party leaders during the video-conference with Prime Minister Narendra Modi on Saturday

ವಿಡಿಯೋ ಸಂವಾದದಲ್ಲಿ ಮಾತನಾಡುತ್ತಿರುವ ಪ್ರಧಾನಿ ಮೋದಿ

Posted By : Manjula VN
Source : The New Indian Express

ಬೆಂಗಳೂರು: ಕೊರೋನಾ ವೈರಸ್ ಲಾಕ್'ಡೌನ್ ಸಂದರ್ಭದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಉತ್ತಮ ಕಾರ್ಯ ನಿರ್ವಹಣೆ ಮಾಡಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ. 

ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ. ನಡ್ಡಾ ಅವರು ಸೇವೆಯೇ ಸಂಘಟನೆ ಅಭಿಯಾನದ ಅವಲೋಕನಾ ಸಭೆಯಲ್ಲಿ ವಿಡಿಯೋ ಮೂಲಕ ಕರ್ನಾಟಕ ಸೇರಿದಂತೆ 7 ವಿವಿಧ ರಾಜ್ಯಗಳ ಬಿಜೆಪಿ ನಾಯಕರ ಜೊತೆೇ ಶನಿವಾರ ಸಂವಾದ ನಡೆಸಿದರು. ಈ ವೇಳೆ, ಸೋಂಕಿನ ಭಯವಿಲ್ಲದೇ ಸಂಕಷ್ಟಕ್ಕೊಳಗಾದ ಲಕ್ಷಾಂತರ ಜನರಿಗೆ ರಾಜ್ಯ ಬಿಜೆಪಿ ಕಾರ್ಯಕರ್ತರು ಸಹಾಯ ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ಪರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ಮಾಹಿತಿ ನೀಡಿದರು. 

ಈ ಕುರಿತಂತೆ ಸಂವಾದದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಯಡಿಯೂರಪ್ಪ ನೇತೃತ್ವದ ಸರ್ಕಾರ ಲಾಕ್'ಡೌನ್ ವೇಳೆ ಕಷ್ಟದಲ್ಲಿದ್ದವರಿಗೆ ಆಹಾರ ಪೊಟ್ಟಣ, ದಿನಸಿ ಹಾಗೂ ಔಷಧಿ ಪೂರೈಸುವಲ್ಲಿ ಉತ್ತಮ ನಿರ್ವಹಣೆ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ನನಗೆ ಈಗಾಗಲೇ ಮಾಹಿತಿ ಬಂದಿದೆ ಎಂದು ಪ್ರಧಾನಮಂತ್ರಿಗಳು ಅಭಿನಂದನೆ ಸಲ್ಲಿಸಿದರು ಎಂದು ತಿಳಿಸಿದರು.

Stay up to date on all the latest ರಾಜ್ಯ news
Poll
Online education learning

ಆನ್‌ಲೈನ್ ಕಲಿಕೆಯ ಪ್ರಯೋಗವು ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುತ್ತದೆ ಎಂದು ಹಾರ್ವರ್ಡ್ ಪ್ರಾಧ್ಯಾಪಕರೊಬ್ಬರು ಹೇಳಿದ್ದಾರೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp