72 ಖಾಸಗಿ ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲು: ಸಚಿವ ಸುಧಾಕರ್

ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರಿಗೆ ಬೆಡ್ ಗಳ ಕೊರತೆ ಎದುರಾಗಿರುವಂತೆಯೇ ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಚಿವ ಸುಧಾಕರ್ ಅವರು, 72 ಖಾಸಗಿ ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳಿವೆ ಎಂದು ಹೇಳಿದ್ದಾರೆ.
ಸಚಿವ ಸುಧಾಕರ್
ಸಚಿವ ಸುಧಾಕರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರಿಗೆ ಬೆಡ್ ಗಳ ಕೊರತೆ ಎದುರಾಗಿರುವಂತೆಯೇ ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಚಿವ ಸುಧಾಕರ್ ಅವರು, 72 ಖಾಸಗಿ ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳಿವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್ ಅವರು, 'ಬೆಂಗಳೂರು ನಗರದಾದ್ಯಂತ ಇರುವ ಒಟ್ಟು 72 ಖಾಸಗಿ ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ. ಶನಿವಾರ ಸಂಜೆಯ ವೇಳೆಗೆ ಇವುಗಳಲ್ಲಿ 733 ಹಾಸಿಗೆಗಳು ಭರ್ತಿಯಾಗಿದ್ದು 2598 ಹಾಸಿಗೆಗಳು ಅಂದರೆ ಸುಮಾರು  ಶೇ.78% ಹಾಸಿಗೆಗಳು ಖಾಲಿಯಿವೆ ಎಂದು ಹೇಳಿದ್ದಾರೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ಗಳ ತೀವ್ರ ಕೊರತೆ ಎದುರಾಗಿದ್ದು, ರೋಗಿಗಳು ಚಿಕಿತ್ಸೆ ಸಿಗದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಕೋವಿಡ್-19 ರೋಗಿಗಳು ಮಾತ್ರರಲ್ಲದೇ ಇತರೆ ರೋಗಿಗಳೂ ಕೂಡ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ  ರಾಜ್ಯ ಸರ್ಕಾರ ಸೋಂಕಿತರಿಗಾಗಿ ಬೆಡ್ ಗಳ ಒದಗಿಸಲು ಸರ್ಕಾರ ಖಾಸಗಿ ಆಸ್ಪತ್ರೆಗಳ ಮೊರೆ ಹೋಗಿದೆ. ಅಲ್ಲದೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲೂ ನೂರಾರು ಬೆಡ್ ಗಳ ವಿಶೇಷ ಕೋವಿಡ್ ಸೆಂಟರ್ ವ್ಯವಸ್ಥೆ ಮಾಡಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com