ವಿಧಾನಸೌಧದ ಕಾವಲುಗಾರ ಸಿಬ್ಬಂದಿಗೆ ಕೊರೋನಾ: ಇಂದು ಮಧ್ಯಾಹ್ನ 12 ಗಂಟೆಗೆ ಕಚೇರಿ ಕಾರ್ಯಾರಂಭ

ವಿಧಾನಸೌಧದ ಪಹರೆ ಮತ್ತು ನಿಗಾವಣೆ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಸೋಮವಾರ ಬೆಳ್ಳಗೆಯೇ ಸಚಿವಾಲಯದ ಎಲ್ಲಾ ಶಾಖೆಗಳನ್ನು ಸ್ಯಾನಿಟೈಸ್ ಮಾಡಿಸಲಾಗುತ್ತಿದೆ.
ವಿಧಾನಸೌಧ(ಸಂಗ್ರಹ ಚಿತ್ರ)
ವಿಧಾನಸೌಧ(ಸಂಗ್ರಹ ಚಿತ್ರ)

ಬೆಂಗಳೂರು: ವಿಧಾನಸೌಧದ ಪಹರೆ ಮತ್ತು ನಿಗಾವಣೆ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಸೋಮವಾರ ಬೆಳ್ಳಗೆಯೇ ಸಚಿವಾಲಯದ ಎಲ್ಲಾ ಶಾಖೆಗಳನ್ನು ಸ್ಯಾನಿಟೈಸ್ ಮಾಡಿಸಲಾಗುತ್ತಿದೆ.

ವಿಧಾನ ಸೌಧದ ಎಲ್ಲಾ ಸಿಬ್ಬಂದಿಗಳು ಇಂದು ಮಧ್ಯಾಹ್ನ 12 ಗಂಟೆಗೆ ಕೆಲಸಕ್ಕೆ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ರಾಜ್ಯ ನೌಕರರ ಸಂಘದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನಸೌಧ ಮೊದಲನೇ ಮಹಡಿಯಲ್ಲಿರುವ ಕಾವಲುಗಾರರ ಕೊಠಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಕಚೇರಿಯನ್ನು ಸ್ಯಾನಿಟೈಸ್ ಮಾಡಿದ ನಂತರ 55 ವರ್ಷ ದಾಟಿದ ಅಧಿಕಾರಿ ಹಾಗೂ ನೌಕರರಿಗೆ ಇಂದು ಒಂದು ದಿನ ಮಾತ್ರ ರಜೆ ಘೋಷಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com