ಮೋದಿ ಇಲ್ಲದಿದ್ದರೆ ದೇಶ ಈ ಮಟ್ಟದಲ್ಲಿ ಕೊರೋನಾದಿಂದ ಬಚಾವಾಗುತ್ತಿರಲಿಲ್ಲ-ಬಿ.ಎಲ್. ಸಂತೋಷ್ 

ಕೊರೋನಾ ಸೋಂಕು ಪ್ರಕರಣಗಳಲ್ಲಿ ಭಾರತ ಮೂರನೇ ಸ್ಥಾನಕ್ಕೇರಿದ್ದು, ಅಮೆರಿಕ ದೇಶದ ಮೂರು ಪಟ್ಟು ಜನ ನಮ್ಮಲ್ಲಿದ್ದಾರೆ. ಹೀಗಾಗಿಯೇ ಸೋಂಕು ಹೆಚ್ಚಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದ್ದಾರೆ.
ಪ್ರಧಾನಿ ಮೋದಿ, ಬಿ.ಎಲ್.ಸಂತೋಷ್
ಪ್ರಧಾನಿ ಮೋದಿ, ಬಿ.ಎಲ್.ಸಂತೋಷ್

ಬೆಂಗಳೂರು: ಕೊರೋನಾ ಸೋಂಕು ಪ್ರಕರಣಗಳಲ್ಲಿ ಭಾರತ ಮೂರನೇ ಸ್ಥಾನಕ್ಕೇರಿದ್ದು, ಅಮೆರಿಕ ದೇಶದ ಮೂರು ಪಟ್ಟು ಜನ ನಮ್ಮಲ್ಲಿದ್ದಾರೆ. ಹೀಗಾಗಿಯೇ ಸೋಂಕು ಹೆಚ್ಚಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದ್ದಾರೆ.

ದೇಶದಲ್ಲಿ ನರೇಂದ್ರ ಮೋದಿ ಇಲ್ಲದಿದ್ದರೆ ಈ ದೇಶ ಕೊರೋನಾದಿಂದ ಈ ಮಟ್ಟದಲ್ಲಿ  ಬಚಾವಾಗುತ್ತಿರಲಿಲ್ಲ. ಈ ಮಾತನ್ನು ದೇಶದ ಹಲವು ಗಣ್ಯರು, ವಿವಿಧ ವಲಯಗಳ ತಜ್ಞರು  ಹೇಳಿದ್ದಾರೆ.ಮೋದಿ ಅವರು ಕೊರೋನಾ ಸಂದರ್ಭದಲ್ಲಿ ದೇಶದಲ್ಲಿನ ಸಮಸ್ಯೆಗಳನ್ನು ಅಷ್ಟರ ಮಟ್ಟಿಗೆ ನಿಯಂತ್ರಣ ಮಾಡಿದ್ದಾರೆ ಎಂದು ಹಾಡಿ ಹೊಗಳಿದ್ದಾರೆ. 

ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಮೊದಲ ವರ್ಷದ ಅಭಿಯಾನದ ಸಮಾರೋಪ ಸಮಾರಂಭವನ್ನು ವರ್ಚುಯಲ್ ಮಾಧ್ಯಮದ ಮೂಲಕ ಉದ್ದೇಶಿಸಿ ಮಾತನಾಡಿದ ಅವರು,ಕೊರೋನಾ ಸಮಸ್ಯೆಯನ್ನು ಇನ್ನೂ ನಾಲ್ಕಾರು ತಿಂಗಳು ದೇಶ ಎದುರಿಸಬೇಕಾಗಿದೆ. ಕೊರೋನಾ ಸಂಕಷ್ಟದ ಕಾಲದಲ್ಲಿ ನಾವಿದ್ದು, ಒಂದು ಪಕ್ಷದ ಕಾರ್ಯಕರ್ತರಾಗಿ ನಾವು ಕೇವಲ ಪಕ್ಷದ ಕೆಲಸ, 
ರಾಜಕೀಯ ಕೆಲಸಕ್ಕೆ ಸೀಮಿತವಾಗಬಾರದು. ಸಾಮಾನ್ಯ ಜನರ ತಲ್ಲಣ, ನೋವುಗಳನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.  
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com