ಹಾಸನ: ಉಸಿರಾಟ ತೊಂದರೆಯಿಂದ ರಾತ್ರಿ ಹೊತ್ತು ಬಂದ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಣೆ!

ಉಸಿರಾಟದ ತೊಂದರೆಯಿಂದ ತೀವ್ರ ಬಳಲುತ್ತಿದ್ದ ಕೋವಿಡ್-19 ಶಂಕಿತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ 30 ವರ್ಷದ ಮಹಿಳೆಯನ್ನು ನಾಲ್ಕು ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹಾಸನ: ಉಸಿರಾಟದ ತೊಂದರೆಯಿಂದ ತೀವ್ರ ಬಳಲುತ್ತಿದ್ದ ಕೋವಿಡ್-19 ಶಂಕಿತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ 30 ವರ್ಷದ ಮಹಿಳೆಯನ್ನು ನಾಲ್ಕು ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸಿವೆ.

ಹಾಸನ ತಾಲ್ಲೂಕಿನ ಕೌಶಿಕ ಗ್ರಾಮದ ಯೆಲ್ಲಮ್ಮ ದೇವಿ ಎಕ್ಸೆಂನ್ಷನ್ ನ ಕೀರ್ತನ ಅವರನ್ನು ನಿನ್ನೆ ರಾತ್ರಿ 11.30ರ ಸುಮಾರಿಗೆ ಆಸ್ಪತ್ರೆಗೆ ಕರೆತರಲಾಗಿತ್ತು. ಹೇಮಾವತಿ ಆಸ್ಪತ್ರೆ, ಸಂಜೀವಿನಿ ಆಸ್ಪತ್ರೆ, ರೆಡ್ ಫರ್ನ್ ಸ್ಮಾರಕ ಆಸ್ಪತ್ರೆ ಮತ್ತು ಮಣಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ರಾತ್ರಿ ಹೊತ್ತು ವೈದ್ಯರುಗಳ ಕೊರತೆಯಿದೆ ಎಂದು ಕಾರಣ ಹೇಳಿ ದಾಖಲಿಸಿಕೊಳ್ಳಲಿಲ್ಲ.

ರೋಗಿ ಮಹಿಳೆಯ ಮನೆಯವರು ಸುಮಾರು 2 ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ. ನಂತರ ಕೊನೆಗೆ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡರು. ಕೋವಿಡ್-19 ರೋಗ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದು ಜಿಲ್ಲಾಸ್ಪತ್ರೆಗೆ ಉಲ್ಲೇಖಿಸುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಹಿಳೆಯ ಸಂಬಂಧಿಕರಾದ ಕುಮಾರ್ ಒತ್ತಾಯಿಸಿದ್ದಾರೆ.

ಉಸಿರಾಟದ ತೊಂದರೆ, ಜ್ವರ, ಕೆಮ್ಮು, ನೆಗಡಿ, ಶೀತ, ಕಫ ಇತ್ಯಾದಿ ಸಮಸ್ಯೆಗಳೆಂದು ಹೇಳಿಕೊಂಡು ಬರುವ ರೋಗಿಗಳನ್ನು ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳದಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳ ವ್ಯವಸ್ಥಾಪಕರು ನಿರ್ಧಾರ ಮಾಡಿಕೊಂಡಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಹಾಸನದ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com