ಕುಣಿಗಲ್ ಶಾಸಕ ಡಾ. ರಂಗನಾಥ್ ಗೂ ಕೊರೋನಾ ಸೋಂಕು

ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ್ ಅವರಿಗೆ ಕೊರೊನಾ ಮಹಾಮಾರಿ ವಕ್ಕರಿಸಿದೆ.ಶಾಸಕರು, ಜು.5ರ ಭಾನುವಾರ ಕೊರೊನಾ ತಪಾಸಣೆಗೆ ಒಳಗಾಗಿದ್ದರು. ಜು.6ರ ಸೋಮವಾರ ಅವರ ವರದಿ ಬಂದಿದ್ದು, ಸೋಂಕು ತಗಲಿರುವುದು ದೃಢಪಟ್ಟಿದೆ. 
ಡಾ.ರಂಗನಾಥ್
ಡಾ.ರಂಗನಾಥ್

ತುಮಕೂರು: ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ್ ಅವರಿಗೆ ಕೊರೊನಾ ಮಹಾಮಾರಿ ವಕ್ಕರಿಸಿದೆ.ಶಾಸಕರು, ಜು.5ರ ಭಾನುವಾರ ಕೊರೊನಾ ತಪಾಸಣೆಗೆ ಒಳಗಾಗಿದ್ದರು. ಜು.6ರ ಸೋಮವಾರ ಅವರ ವರದಿ ಬಂದಿದ್ದು, ಸೋಂಕು ತಗಲಿರುವುದು ದೃಢಪಟ್ಟಿದೆ. 

ಈ ಬಗ್ಗೆ ಮಾತನಾಡಿದ ಶಾಸಕರು, “ಸಾಕಷ್ಟು ಎಚ್ಚರಿಕೆ ವಹಿಸಿದ ಬಳಿಕವೂ ಸೋಂಕು ತಗಲಿದೆ. ಆದ್ದರಿಂದ ಜನರು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ನಾನು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗುತ್ತಿದ್ದೇನೆ. ಕ್ಷೇತ್ರದ ಜನತೆ ನನ್ನ ಬಗ್ಗೆ ಚಿಂತಿಸುವುದು ಬೇಡ’ ಎಂದಿದ್ದಾರೆ.

ಅಲ್ಲದೇ "ಕ್ಷೇತ್ರದ ಜನರ ಆರೋಗ್ಯದ ಬಗ್ಗೆ ಜಾಗೃತೆ ವಹಿಸಲಿ. ಯಾವುದೇ ಸಮಸ್ಯೆ ಇದ್ದರೂ ತಮ್ಮ ಗಮನಕ್ಕೆ ತರಬಹುದು. ಕ್ಷೇತ್ರದ ಜನರು, ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ದೂರವಾಣಿ ಸಂಪರ್ಕಕ್ಕೆ ಲಭ್ಯವಿರುತ್ತೇನೆ. ಮುಂದಿನ 15 ದಿನಗಳ ಕಾಲ ಭೇಟಿ ಸಾಧ್ಯವಿಲ್ಲ" ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com