ಶಾಸಕಿ ಸೌಮ್ಯ ರೆಡ್ಡಿ ಟ್ವೀಟ್: ಸರ್ಕಾರಿ ಆಸ್ಪತ್ರೆಗಳಿಗೆ ಸಚಿವ ಸುಧಾಕರ್ ದಿಢೀರ್ ಭೇಟಿ, ವೈದ್ಯಾಧಿಕಾರಿಗಳಿಗೆ ತರಾಟೆ

ಕೊರೋನಾ ಸೋಂಕಿತ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲು ಅನುಭವಿಸಿದ ಸಮಸ್ಯೆ ಬಗ್ಗೆ ಜಯನಗರ ಶಾಸಕಿ ಸೌಮ್ಯ ರೆಡ್ಡಿ ಮಾಡಿದ್ದ ಟ್ವೀಟ್ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರು ಭಾನುವಾರ ಜಯನಗರ ಸಾರ್ವಜನಿಕ ಆಸ್ಪತ್ರೆ ಮತ್ತು ರಾಜೀವ್‌ ಗಾಂಧಿ ಎದೆ ರೋಗಗಳ ಆಸ್ಪತ್ರೆಗ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಗೆ ಸುಧಾಕರ್ ಭೇಟಿ
ಆಸ್ಪತ್ರೆಗೆ ಸುಧಾಕರ್ ಭೇಟಿ

ಬೆಂಗಳೂರು: ಕೊರೋನಾ ಸೋಂಕಿತ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲು ಅನುಭವಿಸಿದ ಸಮಸ್ಯೆ ಬಗ್ಗೆ ಜಯನಗರ ಶಾಸಕಿ ಸೌಮ್ಯ ರೆಡ್ಡಿ ಮಾಡಿದ್ದ ಟ್ವೀಟ್ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರು ಭಾನುವಾರ ಜಯನಗರ ಸಾರ್ವಜನಿಕ ಆಸ್ಪತ್ರೆ  ಮತ್ತು ರಾಜೀವ್‌ ಗಾಂಧಿ ಎದೆ ರೋಗಗಳ ಆಸ್ಪತ್ರೆಗ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭಾನುವಾರ ಮಧ್ಯಾಹ್ನ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಅಲ್ಲಿದ್ದ ರೋಗಿಗಳು ಹಾಗೂ ತಪಾಸಣೆ ಮಾಡಲು ಬಂದವರ ಬಳಿ ಮಾತುಕತೆ ನಡೆಸಿದರು. ರೋಗಿಗಳ ಜೊತೆಗೆ ಮಾತನಾಡಿದ ಸಚಿವರು ವೈದ್ಯಾಧಿಕಾರಿಗಳಿಗೂ ಸಲಹೆ ಸೂಚನೆಗಳನ್ನು ನೀಡಿದರು.

ಅಲ್ಲದೆ ಐಸಿಯು ಮತ್ತು ಸಾಮಾನ್ಯ ವಾರ್ಡುಗಳಲ್ಲಿರುವ ರೋಗಿಗಳ ಜತೆ ಮಾತುಕತೆ ನಡೆಸಿ ಮಾರ್ಗಸೂಚಿ ಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆಯನ್ನು ನೀಡಿದರು.ಇದೇ ವೇಳೆ ವೈದ್ಯರಲ್ಲೂ ಮುಂದಿನ ದಿನಗಳಲ್ಲಿ ಮತ್ತಷ್ಟು ಕೆಲಸವನ್ನು ಮಾಡಬೇಕು ಎಂದು ವಿನಂತಿ ಮಾಡಿಕೊಂಡರು. ಅಲ್ಲದೆ ಚಿಕಿತ್ಸೆ ಹಾಗೂ ಇನ್ನಿತರ ಸೌಲಭ್ಯಗಳ ಕುರಿತಾಗಿ ಮಾಹಿತಿ ನೀಡದ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಚಿವರ ಬಳಿ ಕೆಲವರು ಆಸ್ಪತ್ರೆಗೆ ಬಂದರೆ ಬೆಡ್‌ ಇಲ್ಲ ಎಂದು ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು. ಸಮಸ್ಯೆಯನ್ನು ಸಾಧ್ಯವಾದಷ್ಟು ಸರಿಪಡಿಸಲಾಗುವುದು ಎಂದು ಸುಧಾಕರ್‌ ಭರವಸೆ ನೀಡಿದರು.
`
ಇನ್ನು ಮುಂದೆ ಸತತವಾಗಿ ಕೋವಿಡ್‌ ಆಸ್ಪತ್ರೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸುವುದನ್ನು ಮುಂದುವರಿಸಿ ರೋಗಿಗಳಿಂದ ನೇರವಾಗಿ ಮಾಹಿತಿ ಪಡೆಯುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವರು ಲೋಪಗಳಿದ್ದಲ್ಲಿ ಸಹಿಸಲು ಸಾಧ್ಯವೇ ಇಲ್ಲ ಎಂದು ಎಚ್ಚರಿಕೆ ನೀಡಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com