ನೇರ ನೇಮಕಾತಿ ಹುದ್ದೆ ಭರ್ತಿಗೆ ತಾತ್ಕಾಲಿಕ ತಡೆ ನೀಡಿದ ರಾಜ್ಯ ಸರ್ಕಾರ

Published: 06th July 2020 10:59 PM  |   Last Updated: 06th July 2020 10:59 PM   |  A+A-


Vidanasouda1

ವಿಧಾನಸೌಧ

Posted By : Nagaraja AB
Source : UNI

ಬೆಂಗಳೂರು: ನೇರನೇಮಕಾತಿ  ಹುದ್ದೆ ಭರ್ತಿಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ.2020-21ನೇ ಸಾಲಿನ  ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆ ಮತ್ತು ಬ್ಯಾಕ್‌ಲಾಗ್ ಹುದ್ದೆಗಳೂ  ಸೇರಿದಂತೆ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ಮುಂದಿನ  ಆದೇಶದವರೆಗೂ ತಾತ್ಕಾಲಿಕ ತಡೆ ನೀಡಿದೆ.

ಕೋವಿಡ್-19 ಪರಿಸ್ಥಿತಿ  ನಿಭಾಯಿಸಲು ಸಂಪನ್ಮೂಲವನ್ನು ಕೋಢೀಕರಿಸುವುದು ಅಗತ್ಯವಾಗಿದ್ದು, ಸರ್ಕಾರ  ವೆಚ್ಚದಲ್ಲಿ ಮಿತವ್ಯಯ ಪಾಲಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ  ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ತಾತ್ಕಾಲಿಕವಾಗಿ ತಡೆ ನೀಡಿದೆ.

ಈಗಾಗಲೇ ಆರ್ಥಿಕ ಇಲಾಖೆಯ ಅನುಮತಿ  ಪಡೆದು ನೇಮಕಾತಿಯ ವಿವಿಧ ಹಂತಗಳಲ್ಲಿರುವ ಹುದ್ದೆಗಳಿಗೂ ಸಹ ಈ ಆದೇಶ ಅನ್ವಯವಾಗುತ್ತದೆ ಎಂದು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್‌ಎನ್  ಪ್ರಸಾದ್ ಸುತ್ತೋಲೆಯಲ್ಲಿ  ತಿಳಿಸಿದ್ದಾರೆ.

Stay up to date on all the latest ರಾಜ್ಯ news
Poll
Online education learning

ಆನ್‌ಲೈನ್ ಕಲಿಕೆಯ ಪ್ರಯೋಗವು ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುತ್ತದೆ ಎಂದು ಹಾರ್ವರ್ಡ್ ಪ್ರಾಧ್ಯಾಪಕರೊಬ್ಬರು ಹೇಳಿದ್ದಾರೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp