ಕೊರೋನಾ ವಿರುದ್ಧ ಹೋರಾಟ: ಕೇಂದ್ರ ತಂಡದಿಂದ ಸಿಎಂ ಭೇಟಿ

ರಾಜಧಾನಿ ಬೆಂಗಳೂರಿನಲ್ಲಿ ನಿಯಂತ್ರಣ ಮೀರಿ ಹಬ್ಬುತ್ತಿರುವ ಕೊರೊನಾ ವಿರುದ್ಧ ಹೋರಾಡಲು ಕರ್ನಾಟಕ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಲು ಕೇಂದ್ರ ಸರ್ಕಾರದ ತಂಡವೊಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿಯಂತ್ರಣ ಮೀರಿ ಹಬ್ಬುತ್ತಿರುವ ಕೊರೊನಾ ವಿರುದ್ಧ ಹೋರಾಡಲು ಕರ್ನಾಟಕ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಲು ಕೇಂದ್ರ ಸರ್ಕಾರದ ತಂಡವೊಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದೆ.

ಕೇಂದ್ರ ಆರೋಗ್ಯ ಇಲಾಖೆಯ ಉನ್ನಾತಾಧಿಕಾರಿಗಳ ತಂಡ ಮಂಗಳವಾರ ಬೆಳಗ್ಗೆ ಹಠಾತ್‌ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿಗೆ ಆಗಮಿಸಲಿರುವ ಕೇಂದ್ರ ಆರೋಗ್ಯ ಇಲಾಖೆ ತಂಡವು ಮಧ್ಯಾಹ್ನ 12 ಗಂಟೆಗೆ ಸಿಎಂ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಲಿದೆ.

ಕೊರೊನಾ ಸಂಬಂಧಿತ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಂದ್ರ ಸರಕಾರದ ಕಣ್ಣು ಕೆಂಪಗಾಗಿಸಿದೆ. ಈ ಸಂಬಂಧ ಬಳಿಕ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜತೆಗೆ ಚರ್ಚೆ ನಡೆಸಲಿದೆ. ಈ ವೇಳೆ ಖರೀದಿ ಹಗರಣದ ಆರೋಪಗಳ ಬಗ್ಗೆಯೂ ಪರಿಶೀಲನೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪಾಸಿಟಿವ್‌ ಸಂಖ್ಯೆ ಹೆಚ್ಚುತ್ತಿದೆ. ದೆಹಲಿ, ಮುಂಬಯಿ ಬಳಿಕ ಬೆಂಗಳೂರಿನಲ್ಲೂ ಪ್ರಕರಣ ಹೆಚ್ಚುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. ಇದರಿಂದ ಆರ್ಥಿಕವಾಗಿ ಹೊಡೆತ ಬೀಳುವ ಅಪಾಯವಿದೆ. ಬೆಂಗಳೂರು ಕೂಡಾ ಅಪಾಯದ ಪಟ್ಟಿಗೆ ಸೇರದಂತೆ ತಡೆಯುವ ಬಗ್ಗೆಯೂ ಕೇಂದ್ರ ತಂಡವು ರಾಜ್ಯ ಸರಕಾರದ ಜತೆ ಚರ್ಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com