ನೇಕಾರರಿಗೆ ನೇರ ನಗದು ವರ್ಗಾವಣೆಗೆ ಸಿಎಂ ಚಾಲನೆ: ಪ್ರತಿ ನೇಕಾರರಿಗೆ ರೂ.2,000 ಆರ್ಥಿಕ ನೆರವು

ನೇಕಾರ್ ಸಮ್ಮಾನ್ ಯೋಜನೆಯಡಿ ರಾಜ್ಯದ ನೇಕಾರರಿಗೆ ನೇರ ನಗದು ವರ್ಗಾವಣೆಗೆ ಚಾಲನೆ ಸಿಕ್ಕಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ. 
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ನೇಕಾರ್ ಸಮ್ಮಾನ್ ಯೋಜನೆಯಡಿ ರಾಜ್ಯದ ನೇಕಾರರಿಗೆ ನೇರ ನಗದು ವರ್ಗಾವಣೆಗೆ ಚಾಲನೆ ಸಿಕ್ಕಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ. 

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕೈಮಗ್ಗ, ನೇಕಾರರಿಗೆ ಮೊದಲನೇ ಹಂತದಲ್ಲಿ 19,744 ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆ ಮಾಡುವ ಮೂಲಕ ಪ್ರತಿ ನೇಕಾರರಿಗೆ ಎರಡು ಸಾವಿರ ಆರ್ಥಿಕ ನೆರವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಹೇಳಿದರು. 

ಕೈಮಗ್ಗ ನೇಕಾರರ ಗಣತಿ ಕಾರ್ಯದಲ್ಲಿ ನೇಕಾರರ ಮಾಹಿತಿ ಆಕಸ್ಮಿಕವಾಗಿ ಕೈಬಿಟ್ಟು ಹೋಗಿದ್ದರೆ ಅಂತಹವರಿಗೂ ನೇಕಾರ ಸಮ್ಮನ್ ಯೋಜನೆಯಡಿ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು. 

ನಾಲ್ಕನೇ ರಾಷ್ಟ್ರೀಯ ಕೈಮಗ್ಗ ಗಣತಿಯ ಪ್ರಕಾರ ರಾಜ್ಯದಲ್ಲಿ ಒಟ್ಟು 54,789 ಕೈ ಮಗ್ಗ ನೇಕಾರರು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿನ ರೇಷ್ಮೆ, ಹತ್ತಿ ಮತ್ತು ಉಣ್ಣೆ ವಲಯದ ಕೈಮಗ್ಗ ಮತ್ತು ಪೂರಕ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರು ಈ ಯೋಜನೆಗೆ ಅರ್ಹರಾಗಿರುತ್ತಾರೆ. 

ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರತಿ ವರ್ಷ ರೂ.10.96 ಕೋಟಿ ವೆಚ್ಚವಾಗಲಿದೆ. ಕೈಮಗ್ಗ ಗಣತಿಯಲ್ಲಿ ನೇಕಾರರ ಮಾಹಿತಿಗಳು ಬಿಟ್ಟು ಹೋಗಿದ್ದರೆ ಅಂತಹವರಿಗೂ ಸಹ ಈ ಯೋಜನೆಯಲ್ಲಿ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com