ದಿನಬಿಟ್ಟು ದಿನ ಮನೆಯಿಂದ ಕೆಲಸ: ರಾಜ್ಯ ಸರ್ಕಾರಿ ನೌಕರರ ಬೇಡಿಕೆ!

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡಲು ಬಯಸುತ್ತಿದ್ದಾರೆ.

Published: 07th July 2020 02:36 PM  |   Last Updated: 07th July 2020 02:36 PM   |  A+A-


Representatiional image

ಸಾಂದರ್ಭಿಕ ಚಿತ್ರ

Posted By : Shilpa D
Source : The New Indian Express

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡಲು ಬಯಸುತ್ತಿದ್ದಾರೆ.

ಸೋಮವಾರ ವಿಧಾನ ಸೌಧವನ್ನು ಸ್ಯಾನಿಟೈಸ್ ಮಾಡಲಾಯಿತು. ಒಂದೇ ವಾರದಲ್ಲಿ 2ನೇ ಬಾರಿ ಸ್ಯಾನಿಟೈಸ್ ಮಾಡಲಾಗಿದೆ, ಸರ್ಕಾರಿ ನೌಕರರು  ಕೊರೋನಾ ಹಿನ್ನೆಲೆಯಲ್ಲಿ ಪದೇ ಪದೇ ರಜೆ ತೆಗೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಹಾಜರಾತಿ ಪ್ರಮಾಣ ಕೂಡ ಕಡಿಮೆಯಾಗಿದೆ, 

ವಿಧಾನ ಸೌಧ ಮತ್ತು ವಿಕಾಸ ಸೌಧ ಸಿಬ್ಬಂದಿಗೆ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಭಾಗಶಃ ಬಂದ್ ಮಾಡಲಾಗಿತ್ತು.  ರಾಜ್ದಲ್ಲಿ 5 ಲಕ್ಷ ಸರ್ಕಾರಿ ನೌಕರರಿದ್ದು, ಹಲವು ಮಂದಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುತ್ತಾರೆ. ಹೀಗಾಗಿ ನೌಕರರು ಸೋಂಕು ಉಂಟಾಗುವ ಭಯದಲ್ಲಿದ್ದಾರೆ ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ.

ಪರ್ಯಾಯ ದಿನಗಳಲ್ಲಿ ಮನೆಯಿಂದಲೇ ಕೆಲಸ ಮಾಡುವ ಅಂದರೆ ದಿನ ಬಿಟ್ಟು ದಿನ ವರ್ಕ್ ಫ್ರಮ್ ಹೋಮ್ ಗೆ ಅವಕಾಶ ನೀಡಬೇಕು ಎಂದು ನೌಕರರ ಸಂಘ  ರಾಜ್ಯ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ ಭಾಸ್ಕರ್ ಅವರಿಗೆ ಪತ್ರ ಬರೆದಿದೆ.

ದಿನ ಬಿಟ್ಟು ದಿನ ಕಚೇರಿಗೆ ಕೆಲಸಕ್ಕೆ ಬರುವಂತೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದೆ.   ಈಗ ನಾವು ಇ-ಆಡಳಿತವನ್ನು ಅಳವಡಿಸಿಕೊಂಡಿದ್ದೇವೆ, ನಮ್ಮಲ್ಲಿ ಇ-ಫೈಲ್‌ಗಳಿವೆ ಮತ್ತು ಸಿಬ್ಬಂದಿ ಮನೆಯಿಂದ ಕೆಲಸ ಮಾಡಬಹುದು.  ತಮಿಳುನಾಡಿನಲ್ಲಿ ಇದೇ ರೀತಿಯ ಕಾರ್ಯವಿಧಾನವಿದೆ, ಅಲ್ಲಿ ಅಂಡರ್ ಸೆಕ್ರೆಟರಿ ಮತ್ತು ಅದಕ್ಕಿಂತ ಹೆಚ್ಚಿನ ಹಿರಿಯ ಅಧಿಕಾರಿಗಳು ಮಾತ್ರ ಕಚೇರಿಗೆ ಹೋಗುತ್ತಾರೆ,  ನೌಕರರು ಪರ್ಯಾಯ ದಿನಗಳಲ್ಲಿ ಕೆಲಸ ಮಾಡುತ್ತಾರೆ, ’’ ಎಂದು ಪತ್ರದಲ್ಲಿ ಬರೆದಿದ್ದಾರೆ. 55 ವರ್ಷ ಮೇಲ್ಪಟ್ಟ ನೌಕರರಿಗೆ ಮನೆಯಿಂದ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಸಹ ಮನವಿ ಮಾಡಲಾಗಿದೆ.

Stay up to date on all the latest ರಾಜ್ಯ news
Poll
Defence minister Rajanath Singh

101 ರಕ್ಷಣಾ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳಲು ನಿರ್ಬಂಧ ಹೇರುವ ಭಾರತದ ಕ್ರಮವು, ದೇಶೀಯ ಶಸ್ತ್ರಾಸ್ತ್ರ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆಯೆ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp