ಕಾಂಗ್ರೆಸ್ ಶಾಸಕ ರಂಗನಾಥ್ ಗೆ ಕೊರೋನಾ ಸೋಂಕು: ಕೆಪಿಸಿಸಿ ಸಿಬ್ಬಂದಿಗೆ ಕೊರೋನಾ ತಪಾಸಣೆ

ಕುಣಿಗಲ್ ಶಾಸಕ ಡಾ. ರಂಗನಾಥ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಕೆಪಿಸಿಸಿ ಕಚೇರಿಯ ಸಿಬ್ಬಂದಿಗೆ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ.
ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿ
ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿ

ಬೆಂಗಳೂರು: ಕುಣಿಗಲ್ ಶಾಸಕ ಡಾ. ರಂಗನಾಥ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಕೆಪಿಸಿಸಿ ಕಚೇರಿಯ ಸಿಬ್ಬಂದಿಗೆ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ.

ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಗೆ ಹಲವು ಭಾರಿ ಶಾಸಕ ರಂಗನಾಥ್ ಭೇಟಿ ನೀಡಿದ್ದರು. ಅಲ್ಲದೆ, ಡಿ.ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದರು. ಈಗ ಅವರಿಗೆ ಕೊರೊನಾ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಯ ಎಲ್ಲ ಸಿಬ್ಬಂದಿಗೆ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕುಣಿಗಲ್ ಕಾಂಗ್ರೆಸ್‌ ಶಾಸಕ ರಂಗನಾಥ್ ಅವರಿಗೆ ಕೋವಿಡ್‌ ದೃಢಪಟ್ಟ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿ ಸಿಬ್ಬಂದಿಗೆ ಮಂಗಳವಾರ ಕೊರೊನಾ ಸೋಂಕು ತಪಾಸಣೆ ನಡೆಯಲಿದೆ. ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೆಪಿಸಿಸಿ ಕಚೇರಿಗೆ ಹಲವು ಭಾರಿ ರಂಗನಾಥ್ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಎಲ್ಲ ಸಿಬ್ಬಂದಿಯನ್ನು ಪರೀಕ್ಷೆಗೆ ಒಳ‍ಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com