ಗುರುಪುರ ಗುಡ್ಡ ಕುಸಿತ ಪ್ರದೇಶದ ನಿವಾಸಿಗಳು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ನೈಋತ್ಯ ಮುಂಗಾರು ಹಿನ್ನೆಲೆಯಲ್ಲಿ ಇತ್ತೀಚೆಗೆ ಗುಡ್ಡ ಕುಸಿದ ಸ್ಥಳದ ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.
ಮಂಗಳೂರು ಗುಡ್ಡ ಕುಸಿತ ಪ್ರಕರಣ
ಮಂಗಳೂರು ಗುಡ್ಡ ಕುಸಿತ ಪ್ರಕರಣ

ಮಂಗಳೂರು: ನೈಋತ್ಯ ಮುಂಗಾರು ಹಿನ್ನೆಲೆಯಲ್ಲಿ ಇತ್ತೀಚೆಗೆ ಗುಡ್ಡ ಕುಸಿದ ಸ್ಥಳದ ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ಇತ್ತೀಚೆಗೆ 16 ಹಾಗೂ 10 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಜೀವಂತವಾಗಿ ಸಮಾಧಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಗ್ರಾಮ ಪಂಚಾಯಿತಿಯ ಬಂಗ್ಲೆ ಗುಡ್ಡೆ, ಮಠದಗುಡ್ಡೆ ಪ್ರದೇಶದ ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಯಿತು.

ನಿವಾಸಿಗಳಿಗೆ ಗುರುಪುರ ಶಾಲೆ, ಪಿಯು ಕಾಲೇಜು ಮತ್ತು ಹಾಸ್ಟೆಲ್‌ಗಳಲ್ಲಿ ತಾತ್ಕಾಲಿಕ ಆಶ್ರಯ ನೀಡಲಾಗಿದ್ದು, ಇನ್ನೂ ಕೆಲವನ್ನು ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲೆಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. 

ರೆಡ್ ಅಲರ್ಟ್ ವಲಯದಲ್ಲಿ ನೆಲೆಗೊಂಡಿರುವ ಈ ಪ್ರದೇಶದ 180 ಮನೆಗಳಲ್ಲಿ ಒಟ್ಟು 40 ಮನೆಗಳಿಗೆ ಭಾರಿ ಮಳೆಯಿಂದಾಗಿ ಹಾನಿಯಾಗಿದೆ. ನಿವಾಸಿಗಳು ಬಾಡಿಗೆ ಮನೆಯಲ್ಲಿ ಉಳಿಯಲು ಬಯಸಿದರೆ, ಕಂದಾಯ ಇಲಾಖೆ 2,500 ರೂ.ಗಳನ್ನು ಬಾಡಿಗೆಗೆ ನೀಡಲು ಸಿದ್ಧವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com