ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಹಿಂಜರಿದರೆ ನಿರ್ದಾಕ್ಷಿಣ್ಯ ಕ್ರಮ: ಪ್ರಹ್ಲಾದ್ ಜೋಶಿ

ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಕೂಡಾ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಖಾಸಗಿ ವೈದ್ಯರಿಗೆ ಸಹಕಾರ ನೀಡಲು ಕೋರಿಕೊಳ್ಳಲಾಗುವುದು. ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ಜಿಲ್ಲಾಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಂಸದೀಯ

Published: 07th July 2020 08:55 PM  |   Last Updated: 07th July 2020 08:55 PM   |  A+A-


Siddaramaiah behind instability, says Pralhad Joshi

ಪ್ರಹ್ಲಾದ್ ಜೋಶಿ

Posted By : Lingaraj Badiger
Source : UNI

ಧಾರವಾಡ: ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಕೂಡಾ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಖಾಸಗಿ ವೈದ್ಯರಿಗೆ ಸಹಕಾರ ನೀಡಲು ಕೋರಿಕೊಳ್ಳಲಾಗುವುದು. ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ಜಿಲ್ಲಾಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಆರೋಗ್ಯ ಕಾರ್ಯಪಡೆ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಖಾಸಗಿ ಆಸ್ಪತ್ರೆಗಳು ಈ ಕಠಿಣ ಸಂದರ್ಭದಲ್ಲಿ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿಯಬಾರದು. ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಸಲಹೆಗಳ ಪ್ರಕಾರ ಪ್ರತಿಯೊಬ್ಬ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಬಳಸಿ, ಸಾಮಾಜಿಕ ಅಂತರ ಕಾಪಾಡಿಕೊಂಡರೆ ಸೋಂಕು ತಡೆಯಬಹುದು. ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ವಾಟ್ಸಪ್, ಫೋನ್ ಹಾಗೂ ಈ-ಮೇಲ್ ಮೂಲಕ ಜನಸ್ಪಂದನೆ ಮಾಡಬೇಕು. ಜಿಲ್ಲೆಯಲ್ಲಿ ಹಿಂದಿನ ಮತ್ತು ಇಂದಿನ ನೂತನ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ವೈದ್ಯರು ಕೋವಿಡ್ ನಿಯಂತ್ರಣಕ್ಕೆ ಸಾಕಷ್ಟು ಶ್ರಮ ವಹಿಸಿದ್ದಾರೆ ಎಂದರು.

ಕೊರೋನಾ ವೈರಸ್ ದೇಶದಲ್ಲಿ ಇನ್ನೂ ಸಮುದಾಯಕ್ಕೆ ಹರಡಿಲ್ಲ. ಆದರೆ ಹೆಚ್ಚು ಹೆಚ್ಚು ಪರೀಕ್ಷೆ ಮಾಡಲಾಗುತ್ತಿದೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಮಾಸ್ಕ್ ಬಳಸದ ವ್ಯಕ್ತಿಗಳಿಂದ 12 ಲಕ್ಷ ರೂ. ದಂಡ ಸಂಗ್ರಹಣೆ
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಬಳಕೆ ಮಾಡದಿರುವ ವ್ಯಕ್ತಿಗಳಿಂದ ಇದುವರೆಗೆ ಸುಮಾರು 12 ಲಕ್ಷ ರೂ.ಗಳ ದಂಡ ಸಂಗ್ರಹಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು 3,19,000/ ರೂ., ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತಾಲಯ 6 ಲಕ್ಷ ರೂ., ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವ್ಯಾಪ್ತಿಯಲ್ಲಿ 3,65,000 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

Stay up to date on all the latest ರಾಜ್ಯ news
Poll
school

ರಾಷ್ಟ್ರೀಯ ಶಿಕ್ಷಣ ನೀತಿ-2020: 5 ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಕಲಿಸುವ ಪ್ರಸ್ತಾಪವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp