ಬೆಂಗಳೂರು: ಸೋಂಕಿತ ಗರ್ಭಿಣಿ ಮಹಿಳೆಯರಿಗಾಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಒಟಿ

ಗರ್ಭಿಣಿ ಮಹಿಳೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ಹರಡುತ್ತಿದ್ದು, ಈ ಬೆಳವಣಿಗೆ ಆಸ್ಪತ್ರೆಯಲ್ಲಿನ ಸಿಬ್ಬಂದಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿರುವ ಬಹುತೇಕ ಆಸ್ಪತ್ರೆಗಳು ಇದೀಗ ಸೋಂಕಿತ ಗರ್ಭಿಣಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಒಟಿ (ಆಪರೇಷನ್ ಥಿಯೇಟರ್) ಸ್ಥಾಪಿಸಲು ಮುಂದಾಗಿವೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಗರ್ಭಿಣಿ ಮಹಿಳೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ಹರಡುತ್ತಿದ್ದು, ಈ ಬೆಳವಣಿಗೆ ಆಸ್ಪತ್ರೆಯಲ್ಲಿನ ಸಿಬ್ಬಂದಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿರುವ ಬಹುತೇಕ ಆಸ್ಪತ್ರೆಗಳು ಇದೀಗ ಸೋಂಕಿತ ಗರ್ಭಿಣಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಒಟಿ (ಆಪರೇಷನ್ ಥಿಯೇಟರ್) ಸ್ಥಾಪಿಸಲು ಮುಂದಾಗಿವೆ. 

ಕೆಲ ದಿನಗಳ ಹಿಂದಷ್ಟೇ ಇಎಸ್ಐ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ತುರ್ತು ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಮಹಿಳೆಗೆ ಸೋಂಕು ಇರುವ ಕುರಿತು ವೈದ್ಯರಿಗೆ ಮಾಹಿತಿಯೇ ಇರಲಿಲ್ಲ. ಅದೃಷ್ಟವಶಾತ್ ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯರು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರು. 

ಶಸ್ತ್ರಚಿಕಿತ್ಸೆ ಪೂರ್ಣಗೊಂಡ ಬಳಿಕ ಮಹಿಳೆಯಲ್ಲಿ ಕೊರೋನಾ ವೈರಸ್ ಇರುವುದು ತಿಳಿದಾಗ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ವೈದ್ಯರು ಆತಂಕಕ್ಕೊಳಗಾಗಿದ್ದರು. 

ಇದೇ ರೀತಿಯ ಮತ್ತೊಂದು ಘಟನೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಭಾನುವಾರ ನಡೆದಿತ್ತು. ತಮಗೆ ಕೊರೋನಾ ಇರುವುದನ್ನು ಮುಚ್ಚಿಟ್ಟಿದ್ದ ಮಹಿಳೆ, ಸಿ ಸೆಕ್ಷನ್ ಮಾಡಿಸಿಕೊಂಡಿದ್ದರು. 

ಮಹಿಳೆ ನಮ್ಮಿಂದ ಸತ್ಯ ಮುಚ್ಚಿಟ್ಟಿದ್ದರು. ಮಾಹಿತಿ ತಿಳಿಯದಿದ್ದರೂ ನಾವು ಪಿಪಿಇ ಕಿಟ್ಸ್ ಧರಿಸಿಯೇ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ್ದೆವು. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನೂ ಕೈಗೊಳ್ಳಲಾಗಿತ್ತು. ಶಸ್ತ್ರಚಿಕಿತ್ಸೆ ಪೂರ್ಣಗೊಂಡ ಬಳಿಕವೇ ಮಹಿಳೆ ತನಗೆ ಸೋಂಕಿರುವುದಾಗಿ ಹೇಳಿಕೊಂಡಿತ್ತು. ಇದರಿಂದ ವಾರ್ಡ್ ನಲ್ಲಿದ್ದ ಇತರೆ ಮಹಿಳೆಯರು, ಆಸ್ಪತ್ರೆಯ ಸಿಬ್ಬಂದಿಗಳು ಆತಂತಕ್ಕೊಳಗಾಗಿದ್ದರು ಎಂದು ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರು. 

ಆಸ್ಪತ್ರೆಯಲ್ಲಿ ಕೇವಲ ಒಂದೇ ಒಂದು ಒಟಿ ಇದ್ದು, ಕೊರೋನಾ ಇರುವ ಹಾಗೂ ಕೊರೋನಾ ಇಲ್ಲದಿರುವ ಎಲ್ಲರಿಗೂ ಇಲ್ಲಿಯೇ ಶಸ್ತ್ರಚಿಕಿತ್ಸ ನಡೆಸಲಾಗುತ್ತಿದೆ. ಇದರಿಂದಾಗಿ ಇತರೆ ಮಹಿಳೆಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಸೋಂಕಿತ ಗರ್ಭಿಣಿಯರಿಗಾಗಿ ಮುಂದಿನ 3-4 ದಿನಗಳಲ್ಲಿ ಪ್ರತ್ಯೇಕ ಒಟಿ ಸ್ಥಾಪಿಸಲಾಗುತ್ತದೆ ಎಂದು ವೈದ್ಯಕೀಯ ಅಧೀಕ್ಷಕ ಬಿ.ಆರ್.ವೆಂಕಟೇಶಯ್ಯ ಅವರು ಹೇಳಿದ್ದಾರೆ. 

ಜಯನಗರ ಜನರಲ್ ಆಸ್ಪತ್ರೆಯ ವೈದ್ಯರು ಮಾತನಾಡಿ, ಕೊರೋನಾ ಪೀಡಿತ ಗರ್ಭಿಣಿ ಮಹಿಳೆಯರಿಗಾಗಿ ಪ್ರತ್ಯೇಕ ಒಟಿ ರಚಿಸಲಾಗುತ್ತಿದೆ. ಶೀಘ್ರದಲ್ಲೇ ಈ ಒಟಿಗಳು ತಮ್ಮ ಕಾರ್ಯನಿರ್ವಹಣೆ ಆರಂಭಿಸಲಿವೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com