ಬೆಂಗಳೂರಿನಲ್ಲಿ 600 ಆಂಬುಲೆನ್ಸ್ ವ್ಯವಸ್ಥೆ ಮಾಡಲು ನಿರ್ಧಾರ: ಮುಖ್ಯಮಂತ್ರಿ ಯಡಿಯೂರಪ್ಪ

ಬಿಐಇಸಿಯಲ್ಲಿ 10 ಸಾವಿರ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ಗೆ ಸಂಜೆ ಭೇಟಿ ನೀಡುತ್ತೇನೆ. ಹೆಚ್ಚುವರಿಯಾಗಿ 280 ಆಂಬುಲೆನ್ಸ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 600 ಆಂಬುಲೆನ್ಸ್ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದ್ದು,
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಬಿಐಇಸಿಯಲ್ಲಿ 10 ಸಾವಿರ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ಗೆ ಸಂಜೆ ಭೇಟಿ ನೀಡುತ್ತೇನೆ. ಹೆಚ್ಚುವರಿಯಾಗಿ 280 ಆಂಬುಲೆನ್ಸ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 600 ಆಂಬುಲೆನ್ಸ್ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸಂಪುಟ ಸಭೆಗೂ ಮುನ್ನ ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಸಿದ್ಧಪಡಿಸಲಾಗಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡುತ್ತಿದ್ದೇನೆ. ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಲವೊಂದು ಸಲಹೆಗಳನ್ನು ನೀಡಿದೆ. ತಂಡದ ಸಲಹೆಯಂತೆ ಹೆಚ್ಚುವರಿಯಾಗಿ ಅಂಬುಲೆನ್ಸ್ ಗಳನ್ನು ಖರೀದಿ ಮಾಡಲು ನಿರ್ಧರಿಸಲಾಗಿದೆ. 

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಈ ಬಗ್ಗೆ ಆಯಾ ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ. ಈ ಬಗ್ಗೆ ನಾಳೆ ನಡೆಯುವ ಸುದ್ದಿಗೋಷ್ಠಿಯಲ್ಲಿ ವಿವರವಾಗಿ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com