ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೋನಾ ಪರಿಸ್ಥಿತಿ ನಿಯಂತ್ರಣ ತಪ್ಪಿದೆ: ಕಡೆಗೂ ಸತ್ಯ ಒಪ್ಪಿಕೊಂಡ ಸಿಎಂ ಯಡಿಯೂರಪ್ಪ
ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೋನಾ ಹಾವಳಿ ನಿಯಂತ್ರಣ ತಪ್ಪುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.
"ನಾವು 10,000 ಹಾಸಿಗೆಗಳಿಗೆ ವ್ಯವಸ್ಥೆ ಮಾಡಿದ್ದೇವೆ. ಈಗ ನಾನು ವ್ಯವಸ್ಥೆಗಳನ್ನು ಪರಿಶೀಲಿಸಲು ಹೊರಟಿದ್ದೇನೆ. ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ತಂಡವು ಇಲ್ಲಿನ ಕೊರೋನಾವೈರಸ್ ಪರಿಸ್ಥಿತಿಯನ್ನು ಪರಿಶೀಲಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ತೆಗೆದುಕೊಂಡ ಕೆಲವು ನಿರ್ಧಾರಗಳಿಗೆ ಮೆಚ್ಚುಗೆಯನ್ನು ಸೂಚಿಸಿದೆ. ಅಲ್ಲದೆ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲುಸಲಹೆಗಳನ್ನು ಸಹ ನೀಡಿದೆ. " ಯಡಿಯೂರಪ್ಪ ಹೇಳಿದ್ದಾರೆ.
"ಕೊರೋನಾವೈರಸ್ ರೋಗಿಗಳಿಗೆ ತೊಂದರೆಯಾಗದಂತೆ ಅವರನ್ನು ಕರೆದೊಯ್ಯಲು ಹೆಚ್ಚುವರಿ ಆಂಬ್ಯುಲೆನ್ಸ್‌ಗಳು ಬೇಕಾಗುತ್ತವೆ ಎಂದು ನಮಗೆ ತಿಳಿದಿದೆ. ಕೆಲವು ಜಿಲ್ಲೆಗಳಲ್ಲಿ ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ಜಿಲ್ಲಾಧಿಕಾರಿಗಳು ಹಗಲು ರಾತ್ರಿ ಪಟ್ಟುಬಿಡದೆ ಕೆಲಸ ಮಾಡುತ್ತಿದ್ದಾರೆ. ನಾಳೆ ಪತ್ರಿಕಾಗೋಷ್ಠಿ ನಡೆಸಲಿದ್ದೇನೆ. ಈ ವಿಷಯದ ಬಗ್ಗೆ ಜನರ ಮನಸ್ಸಿನಲ್ಲಿರುವ ಯಾವುದೇ ಪ್ರಶ್ನೆಗಳಿಗೆ ನಾನು ಉತ್ತರಿಸುತ್ತೇನೆ "ಎಂದು ಅವರು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ