ಜುಲೈ 31ರವರೆಗೆ ಕಲಾಸಿಪಾಳ್ಯ, ಕೆ.ಆರ್.ಮಾರುಕಟ್ಟೆ ಸೀಲ್'ಡೌನ್: ಬಿಬಿಎಂಪಿ ಆದೇಶ
ನಗರದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಮಾರುಕಟ್ಟೆ ಮತ್ತು ಕಲಾಸಿಪಾಳ್ಯ ಜು.31ರವರೆಗೆ ವಿಸ್ತರಣೆ ಮಾಡಿ ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಆದೇಶಿಸಿದ್ದಾರೆ.
Published: 09th July 2020 09:43 AM | Last Updated: 09th July 2020 12:18 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಮಾರುಕಟ್ಟೆ ಮತ್ತು ಕಲಾಸಿಪಾಳ್ಯ ಜು.31ರವರೆಗೆ ವಿಸ್ತರಣೆ ಮಾಡಿ ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಆದೇಶಿಸಿದ್ದಾರೆ.
ಲಾಕ್'ಡೌನ್ ಸಡಿಲಿಕೆ ಬಳಿಕ ಕೆ.ಆರ್.ಮಾರುಕಟ್ಟೆ, ಕಲಾಸಿಪಾಳ್ಯ ಮಾರುಕಟ್ಟೆಗಳು ಪುನಃ ಪ್ರಾರಂಭಗೊಂಡಿದ್ದವು. ಆದರೆ, ಮಾರುಕಟ್ಟೆ ವ್ಯಾಪ್ತಿಯಲ್ಲಿ ಹೆಚ್ಚಿನ ಜನರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಜೂ.22ರಿಂದ ಜು.7ರವರೆಗೆ 15 ದಿನ ಮಾರುಕಟ್ಟೆ ಸೀಲ್'ಡೌನ್ ಮಾಡಿ ಆದೇಶಿಸಿದ್ದರು.
ಇದೀಗ ಸೀಲ್'ಡೌನ್ ಅವಧಿ ಮುಕ್ತಾಯಗೊಂಡಿದ್ದರೂ ನಗರದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇರುವ ಕಾರಣ ಜು.31ರವರೆಗೆ ಮತ್ತೆ ಸೀಲ್'ಡೌನ್ ಅವಧಿ ವಿಸ್ತರಿಸಲಾಗಿದೆ.