ಚಿಕ್ಕಪೇಟೆ, ಸುತ್ತಮುತ್ತಲಿನ ಪ್ರದೇಶಗಳ ಪುನರಾರಂಭಕ್ಕೆ ಅನುಮತಿ ನೀಡಿ: ಸರ್ಕಾರಕ್ಕೆ ಎಫ್'ಕೆಸಿಸಿಐ, ವ್ಯಾಪಾರಿಗಳ ಮನವಿ

ವ್ಯಾಪಾರ, ವ್ಯವಹಾರಗಳು ನಡೆಯದೇ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಚಿಕ್ಕಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಪುನರಾರಂಭಿಸಲು ಅನುಮತಿ ನೀಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್ಕೆಸಿಸಿಐ) ಹಾಗೂ 30ಕ್ಕೂ ಹೆಚ್ಚು ವ್ಯಾಪಾರಿಗಳು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವ್ಯಾಪಾರ, ವ್ಯವಹಾರಗಳು ನಡೆಯದೇ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಚಿಕ್ಕಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಪುನರಾರಂಭಿಸಲು ಅನುಮತಿ ನೀಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್ಕೆಸಿಸಿಐ) ಹಾಗೂ 30ಕ್ಕೂ ಹೆಚ್ಚು ವ್ಯಾಪಾರಿಗಳು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

ಈ ಕುರಿತು ಪತ್ರ ಸರ್ಕಾರಕ್ಕೆ ಪತ್ರ ಬರೆದಿರುವ ವ್ಯಾಪಾರಿಗಳು, ಚಿಕ್ಕಪೇಟೆ ಹಾಗೂ ಇತರೆ ಸುತ್ತಮುತ್ತಲಿನ ಪ್ರದೇಶಗಳನ್ನು ಪುನರಾರಂಭಿಸುವ ಕುರಿತು ಮಧ್ಯಪ್ರವೇಶಿಸುವಂತೆ ಹಾಗೂ ಮರಳಿ ವ್ಯಾಪಾರಗಳು ಆರಂಭಿಸಲು ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. 

ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್,24 ರಂದು ಕೆ.ಆರ್.ಮಾರುಕಟ್ಟೆ, ಕಲಾಸಿಪಾಳ್ಯ, ಚಿಕ್ಕಪೇಟೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳನ್ನು ಬಿಬಿಎಂಪಿ ಸೀಲ್'ಡೌನ್ ಮಾಡಿದೆ. ಇನ್ನು ಕೆಲ ವ್ಯಾಪಾರಿಗಳೂ ಕೂಡ ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಿದ್ದಾರೆ. 

ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪತ್ರ ಬರೆದಿರುವ ಎಫ್ಕೆಸಿಸಿಐ ಅಧ್ಯಕ್ಷ ಸಿ.ಆರ್.ಜನಾರ್ಧನ ಅವರು, ನಮ್ಮ ಮನವಿ ಮೇರೆಗೆ ಬಿಬಿಎಂದಿ ಅಧಿಕಾರಿಗಳು ಸ್ಥಳಕ್ಕೆ ಬಂದು ಸ್ಯಾನಿಟೈಸ್ ಮಾಡಿದ್ದು, ಕಾರ್ಯ ಪೂರ್ಣಗೊಂಡಿದೆ. ಮತ್ತೆ ವ್ಯಾಪಾರ ಹಾಗೂ ವಹಿವಾಟುಗಳಿಗೆ ಸರ್ಕಾರ ಅನುಮತಿ ನೀಡುವ ವಿಶ್ವಾಸವಿತ್ತು. ಆದರೆ, ಇದೀಗ ಅಧಿಕಾರಿಗಳು ಜು.31ರ ಬಳಿಕ ಪುನರಾರಂಭಿಸುವುದಾಗಿ ತಿಳಿಸುತ್ತಿದ್ದಾರೆ. ಈ ಪ್ರದೇಶಗಳು ವ್ಯಾಪಾರ ಚಟುವಟಿಕೆಗಳ ಕೇಂದ್ರವಾಗಿದ್ಜು. ಪ್ರತೀನಿತ್ಯ 100 ಕೋಟಿ ವ್ಯಾಪಾರ, ವಹಿವಾಟು ನಡೆಯುತ್ತದೆ. ಪ್ರತೀನಿತ್ಯ ರೂ.1 ಕೋಟಿ ತೆರಿಗೆ ಸಂಗ್ರಹವಾಗುತ್ತದೆ. ಯಂತ್ರಗಳಿಗೆ ಸಿಗುವ ಬಿಡಿಭಾಗಗಳು ಇಲ್ಲಿ ಬಿಟ್ಟರೆ ಬೇರೆಲ್ಲೂ ಸಿಗುವುದಿಲ್ಲ ಎಂದು ಹೇಳಿದ್ದಾರೆ. 

ಅಂಗಡಿ ಮಾಲೀಕರು ಸರ್ಕಾರ ಮಾರ್ಗಸೂಚಿಯಂತೆಯೇ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಬೀದಿ ವ್ಯಾಪಾರಿಗಳಿಂದಲೇ ಸೋಂಕು ಹರಡಲು ಕಾರಣವಾಗಿದೆ. ಬೀದಿ ವ್ಯಾಪಾರಿಗಳನ್ನು ನಿಯಂತ್ರಿಸಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com