ರಾಜ್ಯದ 18 ಕೋವಿಡ್ ಆಸ್ಪತ್ರೆಗಳಿಗೆ ಒಟ್ಟು 810 ಸಿಬ್ಬಂದಿ ನಿಯೋಜನೆಗಾಗಿ ಸರ್ಕಾರ ಅನುಮೋದನೆ

ಕೋವಿಡ್ ನಿಯಂತ್ರಣ ಹಾಗೂ ಸೋಂಕಿತರ ಸೂಕ್ತ ಚಿಕಿತ್ಸೆಗಾಗಿ ರಾಜ್ಯದ 18 ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರತಿ ಆಸ್ಪತ್ರೆಗೆ 45 ಸಿಬ್ಬಂದಿ ಸೇರಿದಂತೆ 810 ಸಿಬ್ಬಂದಿಯನ್ನು ಗುತ್ತಿಗೆ ಮೇರೆಗೆ ನೇಮಕ ಮಾಡಿಕೊಳ್ಳಲು ಜಿಲ್ಲಾ ಶಸ್ತ್ರಚಿಕಿತ್ಸರಿಗೆ ಅನುಮೋದನೆ ನೀಡಿ ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. 
ರಾಜ್ಯದ 18 ಕೋವಿಡ್ ಆಸ್ಪತ್ರೆಗಳಿಗೆ ಒಟ್ಟು 810 ಸಿಬ್ಬಂದಿ ನಿಯೋಜನೆಗಾಗಿ ಸರ್ಕಾರ ಅನುಮೋದನೆ

ಬೆಂಗಳೂರು: ಕೋವಿಡ್ ನಿಯಂತ್ರಣ ಹಾಗೂ ಸೋಂಕಿತರ ಸೂಕ್ತ ಚಿಕಿತ್ಸೆಗಾಗಿ ರಾಜ್ಯದ 18 ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರತಿ ಆಸ್ಪತ್ರೆಗೆ 45 ಸಿಬ್ಬಂದಿ ಸೇರಿದಂತೆ 810 ಸಿಬ್ಬಂದಿಯನ್ನು ಗುತ್ತಿಗೆ ಮೇರೆಗೆ ನೇಮಕ ಮಾಡಿಕೊಳ್ಳಲು ಜಿಲ್ಲಾ ಶಸ್ತ್ರಚಿಕಿತ್ಸರಿಗೆ ಅನುಮೋದನೆ ನೀಡಿ ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಕೋವಿಡ್ ಕೇರ್ ಕೇಂದ್ರಗಳ ನಿರ್ವಹಣಣೆಗಾಗಿ 1700 ಹೆಚ್ಚುವರಿ ಸಿಬ್ಬಂದಿಯನ್ನು 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮೋದನೆ ನೀಡಿದೆ. 

ಬೆಂಗಳೂರು ನನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಕೋವಿಡ್ ಚಿಕಿತ್ಸೆಗಾಗಿ ಗುರತಿಸಿರುವ 12 ಆಸ್ಪತ್ರೆಗಳಿಗೆ ಹೆಚ್ಚುವರಿಯಾಗಿ 707 ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅನುಮೋದನೆ ನೀಡಲಾಗಿದೆ. 

ರಾಜ್ಯದಲ್ಲಿ 1246 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು, 824 ತಜ್ಞ ವೈದ್ಯರು ಮತ್ತು 88 ದಂತ ವೈದ್ಯಾಧಿಕಾರಿಗಳ ಸ್ವಯಂ ಸ್ವಯಂ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ.

ಗುತ್ತಿಗೆ ವೈದ್ಯರ ವೇತನವನ್ನು ಮಾಸಿಕ 45 ಸಾವಿರ ರೂ.ಗಳಿಂದ 60 ಸಸಾವಿರ ರೂ.ಗಳವರೆಗೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com