ಕೋವಿಡ್ ಕುರಿತ ಜಾಹೀರಾತು ಫಲಕ ಲಗತ್ತಿಸಲು ಹೈಕೋರ್ಟ್ ಅನುಮತಿ ಕೋರಿದ ಸರ್ಕಾರ

ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವಿಕೆ ಹೆಚ್ಚಳದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ನಗರದ ಪ್ರಮುಖ ಪ್ರದೇಶಗಳಲ್ಲಿ ಜಾಹೀರಾತು ಪಲಕಗಳ ಅಳವಡಿಕೆ ಕುರಿತು ಮಾಹಿತಿ ನೀಡಿ ಎಂದು ರಾಜ್ಯ ಸರ್ಕಾರಕ್ಕೆ  ಹೈಕೋರ್ಟ್  ಸೂಚನೆ ನೀಡಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವಿಕೆ ಹೆಚ್ಚಳದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ನಗರದ ಪ್ರಮುಖ ಪ್ರದೇಶಗಳಲ್ಲಿ ಜಾಹೀರಾತು ಪಲಕಗಳ ಅಳವಡಿಕೆ ಕುರಿತು ಮಾಹಿತಿ ನೀಡಿ ಎಂದು ರಾಜ್ಯ ಸರ್ಕಾರಕ್ಕೆ  ಹೈಕೋರ್ಟ್  ಸೂಚನೆ ನೀಡಿದೆ.

ಕೊರೋನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಗರದ ಪ್ರಮುಖ ಪ್ರದೇಶಗಳಲ್ಲಿ ಜಾಹೀರಾತು ಫಲಕ ಲಗತ್ತಿಸಲು ಅನುಮತಿ ಕೋರಿ ರಾಜ್ಯ ಸರ್ಕಾರ ಹೈಕೋರ್ಟಿಗೆ ಮಧ್ಯಂತರ ಅರ್ಜಿ ಸಲ್ಲಿಸಿತ್ತು.

ಈ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ಜಾಹೀರಾತು ಫಲಕಗಳಿಗೆ ಯಾವ ಬಗೆಯ ಪರಿಕರ ಬಳಸಲಾಗುತ್ತದೆ, ಯಾವ್ಯಾವ ಜಾಗದಲ್ಲಿ ಎಷ್ಟು ಅಳತೆಯ ಹೋರ್ಡಿಂಗ್ಸ್ ಅಳವಡಿಸಲಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿ ಎಂದು ಸರ್ಕಾರಿ ವಕೀಲರಿಗೆ ಸೂಚಿಸಿ ಇದೇ 14ಕ್ಕೆ ವಿಚಾರಣೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com