ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಸಚಿವ ಎಸ್. ಸುರೇಶ್ ಕುಮಾರ್

ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶವನ್ನು ನಾಳೆ ಬೆಳಿಗ್ಗೆ 11.30ಕ್ಕೆ ಪ್ರಕಟಿಸಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ.

Published: 13th July 2020 03:33 PM  |   Last Updated: 13th July 2020 03:33 PM   |  A+A-


Education Minister Suresh Kumar

ಸುರೇಶ್ ಕುಮಾರ್

Posted By : Lingaraj Badiger
Source : UNI

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶವನ್ನು ನಾಳೆ ಬೆಳಿಗ್ಗೆ 11.30ಕ್ಕೆ ಪ್ರಕಟಿಸಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಇಂದು ಪಿಯುಸಿ ಪರೀಕ್ಷಾ ಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಹಿತಿ ನೀಡಿದ ಸಚಿವರು, ಈ ಕುರಿತಂತೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನಾಳೆ ಅಧಿಕೃತ ಫಲಿತಾಂಶ ಪ್ರಕಟಣೆಯ ಬಳಿಕ ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಸಂದೇಶ ರವಾನೆಯಾಗುವುದು. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನಾಳೆ ಮಧ್ಯಾಹ್ನ 12 ಗಂಟೆಯ ಬಳಿಕ ಸರ್ಕಾರದ ಅಧಿಕೃತ ಜಾಲತಾಣ www.karresults.nic.in ಗಳಲ್ಲಿಯೂ ಸಹ ವೀಕ್ಷಿಸಬಹುದೆಂದು ತಿಳಿಸಿದ್ದಾರೆ.

ಮಾರ್ಚ್ 4 ರಿಂದ 21 ರವರೆಗೆ ಪಿಯುಸಿ ವಿವಿಧ ವಿಷಯಗಳ ಪರೀಕ್ಷೆಗಳು ನಡೆಸಿದ್ದು, ಕೋವಿಡ್-19 ಲಾಕ್ ಡೌನ್ ಸಡಿಲಿಕೆ ಬಳಿಕ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಜೂ. 18ರಂದು ಆಂಗ್ಲಭಾಷೆ ಯ ಪರೀಕ್ಷೆಗಳನ್ನು ನಡೆಸಲಾಗಿದೆ. ಪರೀಕ್ಷಾ ಮೌಲ್ಯಮಾಪನ ಮುಗಿದಿದ್ದು ಸುಮಾರು 6.75 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಾಳೆ ಹೊರಬೀಳಲಿದೆ ಎಂದು ಅವರು ಹೇಳಿದ್ದಾರೆ.

Stay up to date on all the latest ರಾಜ್ಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp