ಕೋವಿಡ್ ನಿಯಂತ್ರಣ ಹಿನ್ನೆಲೆ; ಎಲ್ಲಾ ವಿಭಾಗದ ವರ್ಗಾವಣೆ ಸ್ಥಗಿತಗೊಳಿಸಿದ ಬಿಬಿಎಂಪಿ

ಬೆಂಗಳೂರು ನಗರದಲ್ಲಿ ಕೋವಿಡ್‌ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಬಿಎಂಪಿಯ ಎಲ್ಲ ವೃಂದಗಳ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.
ಬಿಬಿಎಂಪಿ (ಸಂಗ್ರಹ ಚಿತ್ರ)
ಬಿಬಿಎಂಪಿ (ಸಂಗ್ರಹ ಚಿತ್ರ)

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೋವಿಡ್‌ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಬಿಎಂಪಿಯ ಎಲ್ಲ ವೃಂದಗಳ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.

ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಈ ಕುರಿತು ಸೋಮವಾರ ಸುತ್ತೋಲೆ ಹೊರಡಿಸಿದ್ದು, ಪಾಲಿಕೆಯ ನೌಕರರು ಹಾಗೂ ಅಧಿಕಾರಿಗಳನ್ನು ಈಗಾಗಲೇ ಕೊರೊನಾ ನಿಯಂತ್ರಣ ಕರ್ತವ್ಯಗಳಿಗೆ ನಿಯೋಜಿಸಲಾಗಿದೆ. ಹಾಗಾಗಿ ಮುಂದಿನ ಆದೇಶದವರೆಗೆ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸುತ್ತೋಲೆ ತಿಳಿಸಿದೆ. ಕೊರೊನಾ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಪಾಲಿಕೆ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಈ ಕುರಿತು ಸೋಮವಾರ ಸುತ್ತೋಲೆ ಹೊರಡಿಸಿದ್ದಾರೆ.  ಕೊರೊನಾ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಪಾಲಿಕೆಯ ನೌಕರರು ಹಾಗೂ ಅಧಿಕಾರಿಗಳನ್ನು ಈಗಾಗಲೇ ಕೊರೊನಾ ಸೋಂಕು ನಿಯಂತ್ರಣ ಕಾರ್ಯಗಳಿಗೆ ನಿಯೋಜಿಸಲಾಗಿದೆ. ಇಂತಹ ಸಂದರ್ಭದಲ್ಲಿ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದರೆ ಸೋಂಕು ನಿಯಂತ್ರಣ ಕಾರ್ಯಕ್ಕೆ ತೊಂದರೆ ಉಂಟಾಗಲಿದೆ. ಹಾಗಾಗಿ ಮುಂದಿನ ಆದೇಶದವರೆಗೆ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಸಂದರ್ಭಾನುಸಾರ ಅಧಿಕಾರಿಗಳನ್ನು ಅಥವಾ ನೌಕರರನ್ನು ವರ್ಗಾವಣೆ ಮಾಡುವ ವಿಶೇಷ ಅಧಿಕಾರ ಆಯುಕ್ತರಿಗೆ ಇದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com