ಕೊರೋನಾ ನಿಯಂತ್ರಣಕ್ಕೆ ಜನರಿಗೆ ಉಚಿತ ಆಯುರ್ವೇದ ಔಷಧಿ,ವಿಟಮಿನ್ ಮಾತ್ರೆ ಪೂರೈಸಿ- ಎಚ್ ಡಿ ಕುಮಾರಸ್ವಾಮಿ ಸಲಹೆ

ಕೊರೋನಾ ವ್ಯಾಪಕ‌ ಹೆಚ್ಚಳ ಹಿನ್ನೆಲೆಯಲ್ಲಿ ವಿಟಮಿನ್ ಸಿ ಔಷಧಿ ಹಾಗೂ ಆಯುಷ್ ಸಚಿವಾಲಯ ದೃಢೀಕರಿಸಿದ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ ಗಳು(Immunity Booster) ಮತ್ತು ಸ್ಯಾನಿಟೈಸರ್ ನ್ನು  ಪ್ರತಿ ಮನೆ ಮನೆಗೂ ಸರ್ಕಾರ  ಪೂರೈಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

Published: 13th July 2020 02:43 PM  |   Last Updated: 13th July 2020 02:45 PM   |  A+A-


HDKumaraswamy1

ಎಚ್.ಡಿ. ಕುಮಾರಸ್ವಾಮಿ

Posted By : nagaraja
Source : UNI

ಬೆಂಗಳೂರು: ಕೊರೋನಾ ವ್ಯಾಪಕ‌ ಹೆಚ್ಚಳ ಹಿನ್ನೆಲೆಯಲ್ಲಿ ವಿಟಮಿನ್ ಸಿ ಔಷಧಿ ಹಾಗೂ ಆಯುಷ್ ಸಚಿವಾಲಯ ದೃಢೀಕರಿಸಿದ 
ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ ಗಳು(Immunity Booster) ಮತ್ತು ಸ್ಯಾನಿಟೈಸರ್ ನ್ನು  ಪ್ರತಿ ಮನೆ ಮನೆಗೂ ಸರ್ಕಾರ 
ಪೂರೈಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗೆ ಸಾಮಾಜಿಕ ಜಾಲತಾಣದ 
ಮೂಲಕ ಸಲಹೆ ನೀಡಿರುವ ಅವರು,ಕೊರೋನಾ ಹೆಚ್ಚಿರುವ ಪ್ರದೇಶಗಳಲ್ಲಿ ಆರೋಗ್ಯ ಕಿಟ್ ಗಳು ಪ್ರತಿ ಮೆಡಿಕಲ್ ಹಾಗೂ 
ಇತರ ಅಂಗಡಿಗಳಲ್ಲಿ ಮಾರಾಟಕ್ಕೂ ದೊರೆಯಲಿ.ಇದಲ್ಲದೆ ರೋಗ ಲಕ್ಷಣ ಕಂಡು ಬಂದವರಿಗೂ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಔಷಧಿಗಳನ್ನು ಪೂರೈಸ ಬೇಕು.ಆಗ ಮಾತ್ರ ರಾಜ್ಯದಲ್ಲಿ ಕೊರೋನ‌ ನಿಯಂತ್ರಣ ಮಾಡಲು ಸಾಧ್ಯವೆಂದು ಅಭಿಪ್ರಾಯಪಟ್ಟಿದ್ದಾರೆ.

 

 ಇದರ ಜೊತೆಗೆ ಕೇಂದ್ರ ಸರ್ಕಾರ ಈ ಸೋಂಕು ತಡೆಗೆ ಬಳಸಬಹುದಾದ ಯೋಗ್ಯ ಔಷಧಿಗಳ  ಪಟ್ಟಿ ಒದಗಿಸಿ ಅದನ್ನು ಸಾರ್ವಜನಿಕರು ವ್ಯಾಪಕವಾಗಿ ಬಳಸುವಂತೆ ಸಾಮೂಹಿಕ  ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದಿದ್ದಾರೆ.

ಸರ್ಕಾರ ದಿನಕೊಂದು ನಿರ್ಧಾರ ತೆಗೆದುಕೊಳ್ಳುವ ಮೂಲಕ ಕೊರೋನಾ ವೈರಸ್ ತಡೆಯುವಲ್ಲಿ ಎಡವುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇನ್ನಾದರೂ ಜವಾಬ್ದಾರಿಯಿಂದ, ದೂರದೃಷ್ಟಿಯಿಂದ ಸರ್ಕಾರ ಕಾರ್ಯ ಸಾಧುವಾದ ಯೋಜನೆಗಳನ್ನು ಜಾರಿಗೊಳಿಸಲು ತಕ್ಷಣ ಕಾರ್ಯೋನ್ಮುಖರಾಗುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.


Stay up to date on all the latest ರಾಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp