ಸುದ್ದಿಗೋಷ್ಠಿಯಲ್ಲಿ ಬಿಸಿ ಪಾಟೀಲ್
ಸುದ್ದಿಗೋಷ್ಠಿಯಲ್ಲಿ ಬಿಸಿ ಪಾಟೀಲ್

ಸೋಂಕಿತರ ಸಂಪರ್ಕ ಹಿನ್ನಲೆ; ಕೃಷಿ ಸಚಿವ ಬಿ.ಸಿ ಪಾಟೀಲ್ ಒಂದು ವಾರ ಕ್ವಾರಂಟೈನ್

ಕೊರೋನಾ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದ ಹಿನ್ನಲೆಯಲ್ಲಿ ಕರ್ನಾಟಕ ಕೃಷಿ ಸಚಿವ ಬಿಸಿ ಪಾಟೀಲ್ ಅವರು ಸ್ವಯಂ ಬಂಧನಕ್ಕೊಳಗಾಗಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದ ಹಿನ್ನಲೆಯಲ್ಲಿ ಕರ್ನಾಟಕ ಕೃಷಿ ಸಚಿವ ಬಿಸಿ ಪಾಟೀಲ್ ಅವರು ಸ್ವಯಂ ಬಂಧನಕ್ಕೊಳಗಾಗಿದ್ದಾರೆ.

ಹೌದು.. ಕೃಷಿ ಸಚಿವ ಬಿ.ಸಿ.ಪಾಟೀಲ್ ಗೂ ಕೊರೋನಾ ಆತಂಕ ತಂದೊಡ್ಡಿದೆ. ಬೆಂಗಳೂರಿನ ಸಚಿವರ ಸರ್ಕಾರಿ ನಿವಾಸದಲ್ಲಿದ್ದ ಸಚಿವ ಬಿ.ಸಿ.ಪಾಟೀಲ್ ಸಂಬಂಧಿಕರೊಬ್ಬರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಹೀಗಾಗಿ ಅವರ ಜತೆ ಸಂಪರ್ಕದಲ್ಲಿದ್ದ ಕಾರಣಕ್ಕಾಗಿ ತಾವು ಹಿರೇಕೆರೂರಿನ ಮನೆಯಲ್ಲಿ  ಕ್ವಾರಂಟೈನ್ ಆಗಿದ್ದೇನೆ. ಹಾಗು ತಮ್ಮ ಕುಂಟುಂಬ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದಾರೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಿ.ಸಿ.ಪಾಟೀ ಲ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿ.ಸಿ.ಪಾಟೀಲ್​, ಬೆಂಗಳೂರಿನ ಮಿನಿಸ್ಟರ್​ ಕ್ವಾಟರ್ಸ್​​ನಲ್ಲಿ ನನ್ನ ಸಂಬಂಧಿಕರೊಬ್ಬರಿಗೆ ಕೊರೋನಾ ಸೋಂಕು ತಗುಲಿದೆ. ನಾನೂ ಅವರೊಂದಿಗೆ ಸಂಪರ್ಕದಲ್ಲಿದ್ದೆ. ಹಾಗಾಗಿ ನಾನು ಮತ್ತು ನನ್ನ ಕುಟುಂಬಸ್ಥರು, ಸಿಬ್ಬಂದಿ ವರ್ಗದವರು ಒಂದು ವಾರಗಳ ಕಾಲ ಕ್ವಾರಂಟೈನ್​ ಆಗುತ್ತಿದ್ದೇವೆ.  ಏನಾದರೂ ಅಗತ್ಯವಿದ್ದರೆ 9448467366ಗೆ ಕರೆ ಮಾಡಿ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ,ಮಾಜಿ ಸಚಿವ ರಾಮದಾಸ್ ಸೇರಿದಂತೆ ಹಲವಾರು ಪ್ರಮುಖ ನಾಯಕರು ಸೋಂಕಿತರ ಸಂಪರ್ಕದ ಹಿನ್ನಲೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.ಸಚಿವ ಸಿ.ಟಿ.ರವಿ ಸೇರಿದಂತೆ ಕಾಂಗ್ರೆಸ್,ಬಿಜೆಪಿ ಶಾಸಕರಲ್ಲೂ ಕೊರೋನಾ ಸೋಂಕು ಕಾಣಿಸಿಕೊಂಡು ಚಿಕಿತ್ಸೆ  ಪಡೆಯುತ್ತಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com