ಲಾಕ್ ಡೌನ್ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳಲಿರುವ ಹೈಕೋರ್ಟ್

ಲಾಕ್ ಡೌನ್ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳಲಿದೆ. 
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳಲಿದೆ. 

ಲಾಕ್ ಡೌನ್ ಹಿನ್ನೆಲೆಯಲ್ಲಿ ಜು.15 ರಿಂದ ಮುಂದಿನ ಆದೇಶದವರೆಗೂ ಹೈಕೋರ್ಟ್ ತುರ್ತು ವಿಚಾರಣೆಗಳನ್ನು ಮಾತ್ರ ನಡೆಸಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತುರ್ತು ವಿಚಾರಣೆಗೆ ಲಿಸ್ಟಿಂಗ್ ಗೆ  ಇ-ಮೇಲ್ ಮೂಲಕ ಸಲ್ಲಿಕೆ ಮಾಡಲಾದ ಮೆಮೊಗಳನ್ನು ಮಾತ್ರ ಸ್ವೀಕರಿಸಲಾಗುತ್ತದೆ ಎಂದು ಕೋರ್ಟ್ ನ ರಿಜಿಸ್ಟಾರ್ ಜನರಲ್ ರಾಜೇಂದ್ರ ಬದಾಮಿಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,  ಜು.11 ರಿಂದ 9 ದಿನಗಳ ಲಾಕ್ ಡೌನ್ ವಿಧಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com