ವಾರದ ಲಾಕ್‌ಡೌನ್: ವಲಸೆ ಕಾರ್ಮಿಕರು ಸ್ವಂತ ಸ್ಥಳಗಳಿಗೆ ತೆರಳಲು ಕೆಎಸ್‌ಆರ್‌ಟಿಸಿಯಿಂದ 1,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ರಾಜಧಾನಿಯಲ್ಲಿ ವಾರದ ಲಾಕ್‍ಡೌನ್‍ ಘೋಷಿಸಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ಸುರಕ್ಷಿತವಾಗಿ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೋಮವಾರ ಮತ್ತು ಮಂಗಳವಾರ 1,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ.
ಕೆಎಸ್‌ಆರ್‌ಟಿಸಿ
ಕೆಎಸ್‌ಆರ್‌ಟಿಸಿ

ಬೆಂಗಳೂರು: ರಾಜಧಾನಿಯಲ್ಲಿ ವಾರದ ಲಾಕ್‍ಡೌನ್‍ ಘೋಷಿಸಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ಸುರಕ್ಷಿತವಾಗಿ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೋಮವಾರ ಮತ್ತು ಮಂಗಳವಾರ 1,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ.

ಕೆಎಸ್‌ಆರ್‌ಟಿಸಿ ಈಗಾಗಲೇ ರಾಜ್ಯ ರಾಜಧಾನಿಯಿಂದ 249 ಹೆಚ್ಚುವರಿ ಬಸ್‌ಗಳನ್ನು ಓಡಿಸಿದ್ದು, ಇದುವರೆಗೆ 6,641 ಪ್ರಯಾಣಿಕರನ್ನು ಸಾಗಿಸಿದೆ. ಅಲ್ಲದೆ, 231 ಬಸ್‌ಗಳನ್ನು ಕಾಯ್ದಿರಿಸಲಾಗಿದೆ.

ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗಿರುವುದರಿಂದ ಆತಂಕಪಡಬೇಕಿಲ್ಲ ಎಂದು ಕೆಎಸ್‌ಆರ್‌ಟಿಸಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ವ್ಯಕ್ತಿಗತ ಅಂತರ ಖಚಿತಪಡಿಸಿಕೊಂಡ ನಂತರ ಮತ್ತು ಥರ್ಮಲ್ ಸ್ಕ್ರೀನಿಂಗ್ ನಡೆಸಿ ಪ್ರಯಾಣಿಕರಿಗೆ ಪ್ರಯಾಣಿಸಲು ಅವಕಾಶ ನೀಡಲಾಗುವುದು. ಹೆಚ್ಚುವರಿ ಬಸ್ಸುಗಳನ್ನು ಓಡಿಸಲು ಈಗಾಗಲೇ ಯೋಜಿಸಲಾಗಿದೆ ಎಂದು ನಿಗಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com