ಮಗಳಿಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಮಲತಂದೆ: ಪರಾರಿಯಾಗಿರುವ ಆರೋಪಿಗಾಗಿ ಶೋಧ

ಮಲತಂದೆಯೊಬ್ಬ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Published: 13th July 2020 01:44 AM  |   Last Updated: 13th July 2020 01:44 AM   |  A+A-


Teen Girl raped

ಸಂಗ್ರಹ ಚಿತ್ರ

Posted By : Srinivasamurthy VN
Source : UNI

ಬೆಂಗಳೂರು: ಮಲತಂದೆಯೊಬ್ಬ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೃತ್ಯ ವೆಸಗಿದ ಆರೋಪಿ ಅರಕೆರೆಯ ಸಾಮ್ರಾಟ್ ಲೇಔಟ್ ನ ಅಲೆಗ್ಸಾಂಡರ್ ದಾಸ್ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ. ಆರೋಪಿ ತಂದೆ 20 ವರ್ಷದ ಮಗಳಿಗೆ ಮಾದಕ ವಸ್ತು ಹಾಗೂ ಮದ್ಯವನ್ನು ಕೊಟ್ಟು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗುತ್ತಿದ್ದು ಹೇಯ ಕೃತ್ಯಕ್ಕೆ ತಾಯಿ ಕೂಡ ಸಹಕರಿಸಿದ್ದಾಳೆ ಎಂದು  ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಕಾಲೇಜು ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಸದ್ಯಕ್ಕೆ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ಏನಿದು ಪ್ರಕರಣ?
ಸಂತ್ರಸ್ತೆ ತಾಯಿ ಹಲವು ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನ ಪಡೆದಿದ್ದಳು. ನಂತರ ಆರೋಪಿ ಅಲೆಗ್ಸಾಂಡರ್ ಜೊತೆ ಎರಡನೇ ಮದುವೆ ಮಾಡಿಕೊಂಡಿದ್ದಾಳೆ. ಆರೋಪಿ ನಿರ್ಮಾಣ ಕಂಪನಿಯ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದನು. ಸಂತ್ರಸ್ತೆ ತಾಯಿ ಮತ್ತು ಆರೋಪಿ ತಂದೆಯ ಜೊತೆ ಅರಕೆರೆಯಲ್ಲಿ  ಬಾಡಿಯ ಮನೆಯಲ್ಲಿ ವಾಸ ಮಾಡುತ್ತಿದ್ದು, ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆ ಬಗ್ಗೆ ಪೊಲೀಸ್ ದೂರಿನಲ್ಲಿ ತನ್ನ ಅಳಲು ತೋಡಿಕೊಂಡಿರುವ ಸಂತ್ರಸ್ಥೆ, 'ತಾಯಿ ನನಗೆ ಆಹಾರ ಪದಾರ್ಥದಲ್ಲಿ ನಿದ್ರೆ ಮಾತ್ರೆ ಬೆರೆಸಿ ಕೊಡುತ್ತಿದ್ದರು. ಅದನ್ನು ತಿಂದು ನನಗೆ ಪ್ರಜ್ಞೆ ತಪ್ಪುತ್ತಿತ್ತು. ಆಗ ಮಲತಂದೆ ನನ್ನ ಮೇಲೆ  ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಒಂದು ವರ್ಷದ ಹಿಂದೆ ಮಲತಂದೆ ಕೆಲಸದ ನಿಮಿತ್ತ ನನ್ನನ್ನು ಹೈದರಾಬಾದ್‍ಗೆ ಕರೆದುಕೊಂಡು ಹೋಗಿದ್ದನು. ಈ ವೇಳೆ ಹೋಟೆಲ್‍ನಲ್ಲಿ ಉಳಿದುಕೊಂಡಿದ್ದೆವು. ಆಗ ನನಗೆ ಬಲವಂತವಾಗಿ ಮದ್ಯ ಕುಡಿಸಿದ್ದನು. ನಾನು ಪ್ರಜ್ಞೆ ತಪ್ಪಿದ ನಂತರ ಅತ್ಯಾಚಾರ  ಎಸಗಿದ್ದಾನೆ. ಬೆಳಗ್ಗೆ ಎಚ್ಚರಗೊಂಡಾಗ ಬಟ್ಟೆ ಇರುತ್ತಿರಲಿಲ್ಲ. ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಅಷ್ಟೇ ಅಲ್ಲದೇ ಕಾಲೇಜಿಗೆ ಹೋಗುವುದನ್ನು ನಿಲ್ಲಿಸಿ ಮಾಡೆಲಿಂಗ್ ಮಾಡು, ನಗ್ನ ಫೋಟೋಗಳ್ನು ತೆಗೆಸಿಕೊಂಡು ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸುವಂತೆ ಒತ್ತಾಯಿಸಿದ್ದಾನೆ. ಜೊತೆಗೆ ಪ್ರತಿದಿನ ಮಾದಕ ವಸ್ತು ಮತ್ತು ಮದ್ಯ ಸೇವನೆ ಮಾಡುವಂತೆ ಮಲತಂದೆ ಪೀಡಿಸಿದ್ದಾನೆ. ಅನೇಕ ಬಾರಿ ನನಗೆ  ತಿಳಿಯದಂತೆ ಆಹಾರ ಪದಾರ್ಥದಲ್ಲಿ ಮಾದಕ ವಸ್ತು ಬೆರೆಸಿ ನೀಡಿದ್ದಾನೆ. ಈ ಕೃತ್ಯಕ್ಕೆ ತಾಯಿಯೂ ಸಹಕರಿಸಿದ್ದಾರೆ. ಇದೇ ರೀತಿ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ. ಒಂದು ವೇಳೆ ನಾನು ಪ್ರಶ್ನೆ ಮಾಡಿದರೆ, ನನ್ನ ಮೊಬೈಲ್ ಫೋನ್ ಕಿತ್ತುಕೊಂಡು ಕಾಲೇಜಿಗೆ ಹೋಗಬೇಡ ಎನ್ನುತ್ತಿದ್ದರು. ಬೇರೆ  ಯಾರಿಗಾದರೂ ಈ ಬಗ್ಗೆ ಹೇಳಿದರೆ ನಾನು ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದನು. ಕೊನೆಗೆ ಇದರಿಂದ ನೊಂದು ನಾನು ಮನೆ ಬಿಟ್ಟು ಹೋಗಿದ್ದೆ. ಹೀಗಾಗಿ ನನಗೆ ಜೀವ ಭಯವಿದೆ. ನನಗೆ ರಕ್ಷಣೆ ಕೊಡಿ ಎಂದು ಸಂತ್ರಸ್ತೆ ಪೋಸರಿಗೆ ಮನವಿ ಮಾಡಿಕೊಂಡಿದ್ದಾಳೆ.

ಅಲ್ಲದೇ ನನ್ನ ಮೇಲೆ ಅತ್ಯಾಚಾರ ನಡೆಸಿ, ಮಾನಸಿಕ, ದೈಹಿಕವಾಗಿ ಕಿರುಕುಳ ನೀಡಿರುವ ಆರೋಪಿ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ. ಸದ್ಯಕ್ಕೆ ಹುಳಿಮಾವು ಪೊಲೀಸರು ಈ ಕುರಿತು ದೂರು ದಾಖಲಿಸಿಕೊಂಡು ಆರೋಪಿ ಮಲತಂದೆಗಾಗಿ ಬಲೆ ಬೀಸಿದ್ದಾರೆ.

Stay up to date on all the latest ರಾಜ್ಯ news
Poll
Defence minister Rajanath Singh

101 ರಕ್ಷಣಾ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳಲು ನಿರ್ಬಂಧ ಹೇರುವ ಭಾರತದ ಕ್ರಮವು, ದೇಶೀಯ ಶಸ್ತ್ರಾಸ್ತ್ರ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆಯೆ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp