ಕೋವಿಡ್ ಶಂಕಿತ ರೋಗಿಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಬೇಕು: 108 ಆರೋಗ್ಯ ಕವಚಕ್ಕೆ ಆರೋಗ್ಯ ಇಲಾಖೆ ಸೂಚನೆ

ಕೊರೋನಾ ಸೋಂಕಿನ ಶಂಕಿತ ವ್ಯಕ್ತಿಯ ತಪಾಸಣಾ ವರದಿ ಬರುವುದು ಬಾಕಿ ಇದ್ದರೂ ಅವರನ್ನು ತಕ್ಷಣ ನಿಗದಿತ ಕೋವಿಡ್ ಆಸ್ಪತ್ರೆಗೆ ಕೂಡಲೇ ದಾಖಲಿಸಬೇಕು ಎಂದು ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ ಆದೇಶ ನೀಡಿದ್ದಾರೆ.
108 ಅಂಬುಲೆನ್ಸ್
108 ಅಂಬುಲೆನ್ಸ್

ಬೆಂಗಳೂರು: ಕೊರೋನಾ ಸೋಂಕಿನ ಶಂಕಿತ ವ್ಯಕ್ತಿಯ ತಪಾಸಣಾ ವರದಿ ಬರುವುದು ಬಾಕಿ ಇದ್ದರೂ ಅವರನ್ನು ತಕ್ಷಣ ನಿಗದಿತ ಕೋವಿಡ್ ಆಸ್ಪತ್ರೆಗೆ ಕೂಡಲೇ ದಾಖಲಿಸಬೇಕು ಎಂದು ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ ಆದೇಶ ನೀಡಿದ್ದಾರೆ. ಈ ಕುರಿತು 108 ಆರೋಗ್ಯ ಕವಚ ಆಂಬುಲೆನ್ಸ್ ಸೇವೆಯ ನೋಡಲ್ ಅಧಿಕಾರಿಗಳಿಗೆ  ಸೂಚನೆ ನೀಡಿ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಉಸಿರಾಟ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳನ್ನು ಕೋವಿಡ್ ಶಂಕಿತರು ಎಂದು ಪರಿಗಣಿಸಿ, ಆಸ್ಪತ್ರೆಗೆ ದಾಖಲಿಸಿಕೊಂಡು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಬೇಕು. ಅವರಿಗೆ ಬಿಬಿಎಂಪಿ ಅಧಿಕಾರಿಗಳ ಪತ್ರ ಅಗತ್ಯವಿಲ್ಲ. ಸೋಂಕು ದೃಢಪಟ್ಟಲ್ಲಿ ಕೋವಿಡ್‌ ವಾರ್ಡ್‌ಗೆ ಸ್ಥಳಾಂತರ ಮಾಡಬೇಕು. ಪರೀಕ್ಷೆ ನೆಗೆಟೀವ್ ಬಂದಲ್ಲಿ ಅಲ್ಲಿಯೇ ಚಿಕಿತ್ಸೆ ಮುಂದುವರೆಸಬೇಕು ಎಂದು ಸೂಚಿಸಿದ್ದಾರೆ.

108ಕ್ಕೆ ಕರೆ ಬಂದಲ್ಲಿ ಸೋಂಕಿತರಾಗಿದ್ದಾರೆಯೇ ಅಥವಾ ಸೋಂಕು ಲಕ್ಷಣಗಳು ಕಾಣಿಸಿಕೊಂಡಿದೆಯೇ ಎಂದು ವಿಚಾರಿಸಿ ಸನಿಹ ಕೋವಿಡ್‌ ಆರೈಕೆ ಕೇಂದ್ರಕ್ಕೆ ದಾಖಲಿಸಬೇಕು‌.ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಾದ ವ್ಯಕ್ತಿಯನ್ನು ನಿಗದಿತ ಆಸ್ಪತ್ರೆಗೆ ಸ್ಥಳಾಂತರಿಸುವುದು108 ಕರ್ತವ್ಯ. ವ್ಯಕ್ತಿ ನೇರವಾಗಿ ಕೋವಿಡ್ ಆರೈಕೆ ಕೇಂದ್ರಕ್ಕೆ ಬಂದಲ್ಲಿ ದಾಖಲು ಮಾಡಿಕೊಂಡು ಬಿಬಿಎಂಪಿಗೆ ಮಾಹಿತಿ ನೀಡಬೇಕು ಎಂದು ಸುತ್ತೋಲೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com