ಭಾರತದಲ್ಲಿ ಈ ವಾರ ಸೋಂಕಿತರ ಸಂಖ್ಯೆ 10 ಲಕ್ಷ ದಾಟಲಿದೆ: ರಾಹುಲ್ ಗಾಂಧಿ

ಭಾರತದಲ್ಲಿ ಈ ವಾರ ಕೊರೋನಾ ಸೋಂಕಿತರ ಸಂಖ್ಯೆ 10 ಲಕ್ಷ ಗಡಿ ದಾಟಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಂಗಳವಾರ ಹೇಳಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಭಾರತದಲ್ಲಿ ಈ ವಾರ ಕೊರೋನಾ ಸೋಂಕಿತರ ಸಂಖ್ಯೆ 10 ಲಕ್ಷ ಗಡಿ ದಾಟಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಂಗಳವಾರ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಕೊರೋನಾ ಪರಿಸ್ಥಿತಿ ನಿರ್ವಹಣೆ ಕುರಿತು ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ. 

ಮುಂದಿನ ವಾರ ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ದಾಟಲಿದೆ ಎಂದಿರುವ ರಾಹುಲ್ ಗಾಂಧಿಯವರು ಟ್ವೀಟ್ ಜೊತೆಗೆ ವಿಶ್ವ ಆರೋಗ್ಯ ಸಂಸ್ಥೆಯ ವರದಿಯೊಂದನ್ನು ಹಾಕಿಕೊಂಡಿದ್ದಾರೆ. 

ವಿಶ್ವ ಆರೋಗ್ಯ ಸಂಸ್ಥೆಯ ವರದಿಯಲ್ಲಿ ಸರ್ಕಾರ ಕಠಿಣ ನಿರ್ಣಯಗಳನ್ನು ಕೈಗೊಳ್ಳದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ ಎಂದು ಹೇಳಿದೆ. 

ಈ ನಡುವೆ ಭಾರತದಲ್ಲಿ ಮಂಗಳವಾರ ಒಂದೇ ದಿನ 28,498 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 9 ಲಕ್ಷ ಗಡಿ ದಾಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com