ಬೆಂಗಳೂರು: ನಮ್ಮ ಸಂಬಳ ಎಲ್ಲಿದೆ ತೋರಿಸಿ, ಪಾಸ್ ಬುಕ್ ಪ್ರದರ್ಶಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ತಿಂಗಳಿಗೆ 12 ಸಾವಿರ ರು. ಗೌರವಧನ ನೀಡಬೇಕು ಎಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ರಾಜ್ಯಾದ್ಯಂತ ನಡೆಸುತ್ತಿರುವ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ.
ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು: ತಿಂಗಳಿಗೆ 12 ಸಾವಿರ ರು. ಗೌರವಧನ ನೀಡಬೇಕು ಎಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ರಾಜ್ಯಾದ್ಯಂತ ನಡೆಸುತ್ತಿರುವ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಎಐಯುಟಿಯುಸಿ ನೇತೃತ್ವದಲ್ಲಿ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಆಯಾ ಗ್ರಾಮ ಜಿಲ್ಲೆ, ತಾಲ್ಲೂಕು, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿಗಳ ಎದುರು ಪ್ರತಿಭಟನೆ ನಡೆಸಿದ್ದು, ಅದರಂತೆ ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ತಮ್ಮ ಮನವಿ ಪತ್ರ ಸಲ್ಲಿಸಿದರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನಾ ದರಣಿ ನಡೆಸಿದ ಕಾರ್ಯಕರ್ತೆಯರು ತಮ್ಮ ಬ್ಯಾಂಕ್ ಪಾಸ್ ಬುಕ್ ಪ್ರದರ್ಶಿಸಿ ಇಲಾಖೆ ತಮಗೆ ನೀಡಿದ ಭರವಸೆಗಳ ಸಾಕ್ಷಿ ತೋರಿಸಿದರು. ತಮಗೆ ಇನ್ನೂ ಜೂನ್ ತಿಂಗಳ ವೇತನ ನೀಡಿಲ್ಲ ಎಂಬುದಕ್ಕೆ ಪಾಸ್ ಬುಕ್ ಸಾಕ್ಷಿ ತೋರಿಸಿದರು.

ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ನಿರಂತರ ಹೋರಾಟ ಮಾಡುತ್ತಿದ್ದೆವೆ. ಇಲ್ಲಿಯವರೆಗೆ ಆಶಾ ಸಂಘದಿಂದ  ರಾಜ್ಯವ್ಯಾಪಿ ಹೋರಾಟಗಳು ನಡೆದಿವೆ. ಆದರೆ ರಾಜ್ಯಸರ್ಕಾರ ನಿರ್ಲಕ್ಷ್ಯ ಮತ್ತು ಜನವಿರೋಧಿ ಧೋರಣೆ ಅನುಸರಿಸುತ್ತಿದೆ. ಕೆಲವರಿಗೆ ನಾಲ್ಕು ತಿಂಗಳು, ಆರು ತಿಂಗಳು 9 ತಿಂಗಳಿಂದಲೂ ಸಂಬಳ ನೀಡಿಲ್ಲ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com