ಬೆಂಗಳೂರಿನಲ್ಲಿ ಇನ್ನೊಂದು ವಾರ ಮದ್ಯ ಮಾರಾಟ ನಿಷೇಧ: ಭಾಸ್ಕರ್ ರಾವ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಬೆಂಗಳೂರಿನಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ಒಂದು ವಾರಗಳ ಲಾಕ್ಡೌನ್ ಸಂದರ್ಭದಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಬೆಂಗಳೂರಿನಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ಒಂದು ವಾರಗಳ ಲಾಕ್ಡೌನ್ ಸಂದರ್ಭದಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

ಹೌದು.. ಒಂದು ವಾರ ಲಾಕ್​ಡೌನ್ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ನಗರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧವನ್ನ ಹೇರಿ ಕಮಿಷನರ್ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದು ವಾರ ಲಾಕ್​ಡೌನ್ ಜಾರಿ ಮಾಡಿದೆ. ಸರ್ಕಾರದ ಲಾಕ್​ಡೌನ್ ಆದೇಶವನ್ನ ಕಟ್ಟುನಿಟ್ಟಾಗಿ ಜಾರಿಗೆ ತರುವ ಉದ್ದೇಶದಿಂದ ಭಾಸ್ಕರ್ ರಾವ್ ಈ ನಿರ್ಧಾರಕ್ಕೆ ಮುಂದಾಗಿದ್ದಾರೆ.

ಬೆಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ಜುಲೈ 14 ರಾತ್ರಿ 8 ಗಂಟೆಯಿಂದ ಜುಲೈ 22 ಬೆಳಗ್ಗೆ ಗಂಟೆಯವರೆಗೆ ಎಲ್ಲಾ ವಿಧದ ಮದ್ಯ ಮಾರಾಟವನ್ನ ಮಾಡದಂತೆ ಆದೇಶ ಹೊರಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com