ಸುರೇಶ್ ಕುಮಾರ್ ಹೆಸರಿನ ನಕಲಿ ಟ್ವಿಟರ್ ಖಾತೆ: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿ ತಪ್ಪು ಸಂದೇಶವನ್ನು ಹರಿಬಿಟ್ಟಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಲಾಗಿದೆ.
ನಕಲಿ ಟ್ವಿಟರ್ ಖಾತೆ
ನಕಲಿ ಟ್ವಿಟರ್ ಖಾತೆ

ಬೆಂಗಳೂರು::ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿ ತಪ್ಪು ಸಂದೇಶವನ್ನು ಹರಿಬಿಟ್ಟಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಲಾಗಿದೆ.

ಮಂಗಳವಾರ ಸಚಿವರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಫಲಿತಾಂಶ ಘೋಷಣೆ ಮಾಡುತ್ತಿದ್ದ ಸಂದ ರ್ಭದಲ್ಲಿ ಸಚಿವರ ಹೆಸರಿನ ನಕಲಿ ಟ್ವಿಟರ್ ಖಾತೆಯಲ್ಲಿ “ಇಂಗ್ಲಿಷ್ ವಿಷಯದಲ್ಲಿ ವಿದ್ಯಾರ್ಥಿಗಳಿಗೆ 26 ಗ್ರೇಸ್ ಅಂಕಗಳನ್ನು ನೀಡುವ ಕುರಿತು ಮೌಲ್ಯಮಾಪಕರಿಗೆ ಸೂಚಿಸಲಾಗಿದೆ’ಎಂಬ ಸುಳ್ಳು ಸಂದೇಶವನ್ನು ಸಾಮಾಜಿ ಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸೈಬರ್ ಕ್ರೈಂ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. 

ಬಾಕಿ ಉಳಿದಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಜೂ.18ರಂದು ನಡೆದಿದ್ದು, ರಾಜ್ಯದ 20 ಮೌಲ್ಯಮಾಪನ ಕೇಂದ್ರದಲ್ಲಿ ಜೂ.20ರಿಂದ ಜು.7ರವರಗೆ ನಡೆದಿದ್ದು,ಜು.4ರಂದು ಫಲಿತಾಂಶ ಪ್ರಕಟಿಸಲಾ ಗಿದೆ.ದೂರಿನ ಜೊತೆ ನಕಲಿ ಟ್ವಿಟರ್ ಖಾತೆಯಲ್ಲಿ ಹರಿಯಬಿಟ್ಟ ಸಂದೇಶದ ಪ್ರತಿಯನ್ನು ಲಗತ್ತಿಸಿದ್ದು,ಈ ನಕಲಿ ಸಂದೇಶದಿಂದ ರಾಜ್ಯದ ಪಿಯು ವಿದ್ಯಾರ್ಥಿಗಳು,ಪೋಷಕರು,ಇಲಾಖೆಯ ಅಧಿಕಾರಿಗಳಲ್ಲಿ ಆತಂಕ,ಗೊಂದಲ ಗಳಿಗೆ ಕಾರಣವಾಗಿದ್ದು,ಇದು ಇಲಾಖೆಗೆ ಮುಜುಗರದ ಸನ್ನಿವೇಶ ವನ್ನು ಸೃಷ್ಟಿಸಿತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹೆಸರಿನಲ್ಲಿ ನಕಲಿ ಖಾತೆ ತೆರೆದು ಇಲಾಖೆಗೆ ಮುಜುಗರ ತರುವಂತಹ ಸಂದೇಶ ಹರಿಯಬಿಟ್ಟ ಕಿಡಿಗೇಡಿಗಳನ್ನು ಪತ್ತೆ ಮಾಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com