ಹುಬ್ಬಳ್ಳಿ: ಕೊರೋನಾ ಸೋಂಕಿತ ಎಲ್ಲಾ ಆರೋಪಿಗಳನ್ನು ಕೊವಿಡ್ ಕೇರ್ ಸೆಂಟರ್ ಗೆ ಶಿಫ್ಟ್

ಕೊರೋನಾ ಸೋಂಕಿತ ಎಲ್ಲಾ ಆರೋಪಿಗಳನ್ನು ನಗರದ ಹೆಗ್ಗೆರಿಯ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರಿಸಲು ಹುಬ್ಬಳ್ಳಿ - ಧಾರವಾಡ ಪೊಲೀಸರು ನಿರ್ಧರಿಸಿದ್ದಾರೆ.
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ

ಹುಬ್ಬಳ್ಳಿ: ಕೊರೋನಾ ಸೋಂಕಿತ ಎಲ್ಲಾ ಆರೋಪಿಗಳನ್ನು ನಗರದ ಹೆಗ್ಗೆರಿಯ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರಿಸಲು ಹುಬ್ಬಳ್ಳಿ - ಧಾರವಾಡ ಪೊಲೀಸರು ನಿರ್ಧರಿಸಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ಕೊರೋನಾ ಸೋಂಕಿತ ಆರೋಪಿ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದರಿಂದ ಪೊಲೀಸರು ಈ ನಿರ್ಧಾರಕ್ಕೆ ಬಂದಿದ್ದಾರೆ.ಕಳ್ಳತನದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ 55 ವರ್ಷದ ಆರೋಪಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಆರೋಪಿಯನ್ನು ಕಿಮ್ಸ್ ಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು 12 ಗಂಟೆಯಲ್ಲಿ ಗದಗದಲ್ಲಿ ಬಂಧಿಸಿ ಕರೆತಂದಿದ್ದಾರೆ. 

ಇದುವರೆಗೆ ಬಂಧಿತ ಮೂವರು ಆರೋಪಿಗಳಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಈ ಮೂವರನ್ನು ಕೊವಿಡ್ ಕೇರ್ ಸೆಂಟರ್ ಗೆ ಶಿಫ್ಟ್ ಮಾಡಿದ್ದಾರೆ.

ಸುರಕ್ಷತಾ ಕಾರಣಗಳಿಗಾಗಿ ಸೋಂಕಿತ ಆರೋಪಿಗಳನ್ನು ಕೊವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರಿಸಲಾಗಿದೆ. ಕೇಂದ್ರದಲ್ಲಿ ಆರೋಪಿಗಳ ಭದ್ರತೆಗಾಗಿ ನಾವು ಹಲವಾರು ಪೊಲೀಸರನ್ನು ನಿಯೋಜಿಸಿದ್ದೇವೆ. ಕೇಂದ್ರದಲ್ಲಿ ಆರೋಪಿಗಳ ಸಂಖ್ಯೆ ಹೆಚ್ಚಾದರೆ ನಾವು ಹೆಚ್ಚಿನ ಪೊಲೀಸರನ್ನು ನಿಯೋಜಿಸುತ್ತೇವೆ ಎಂದು ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com