ಕೊವಿಡ್-19: ಖಾಸಗಿ ಆಸ್ಪತ್ರೆಗಳು ಲಭ್ಯವಿರುವ ಬೆಡ್ ಗಳ ಮಾಹಿತಿ ಬೋರ್ಡ್ ನಲ್ಲಿ ಪ್ರದರ್ಶಿಸುವುದು ಕಡ್ಡಾಯ

ಕೊರೋನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಕಡ್ಡಾಯವಾಗಿ ಆಸ್ಪತ್ರೆಯ ಬೋರ್ಡ್ ನಲ್ಲಿ ಪ್ರದರ್ಶಿಸಬೇಕು ಎಂದು ಬುಧವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ಕೊರೋನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಕಡ್ಡಾಯವಾಗಿ ಆಸ್ಪತ್ರೆಯ ಬೋರ್ಡ್ ನಲ್ಲಿ ಪ್ರದರ್ಶಿಸಬೇಕು ಎಂದು ಬುಧವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಪಿಎಇ ಅಡಿ ನೋಂದಣಿಯಾದ ಎಲ್ಲಾ ಖಾಸಗಿ ಆಸ್ಪತ್ರೆಗಳು ಸ್ವಾಗತ ಕೌಂಟರ್ ಬಳಿ ಕೊವಿಡ್-19 ರೋಗಿಗಳಿಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಬೋರ್ಡ್ ನಲ್ಲಿ ಆಸ್ಪತ್ರೆಯ ಹೆಸರು, ಲಭ್ಯವಿರುವ ಬೆಡ್ ಗಳ ಸಂಖ್ಯೆ ಮತ್ತು ಈಗಾಗಲೇ ಬಿಬಿಎಂಪಿ ರೆಫೆರ್ ಮಾಡಿದ ಕೊರೋನಾ ಸೋಂಕಿತರಿಗೆ ಎಷ್ಟು ಬೆಡ್ ನೀಡಲಾಗಿದೆ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಖಾಸಗಿ ಆಸ್ಪತ್ರೆಗಳು ಜುಲೈ 16ರೊಳಗೆ ಬೋರ್ಡ್ ನಲ್ಲಿ ಲಭವ್ಯವಿರುವ ಬೆಡ್ ಗಳ ಮಾಹಿತಿ ಪ್ರದರ್ಶಿಸಬೇಕು. ಒಂದು ವೇಳೆ ಸರ್ಕಾರದ ಆದೇಶ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com