ದೋಷ ಹುಡುಕಲ್ಲ, ಆರೋಪ ಮಾಡಲ್ಲ: ಆಸ್ಪತ್ರೆಯ ವೈದ್ಯರು, ರೋಗಿಗಳಿಗೆ ನೈತಿಕ ಸ್ಥೈರ್ಯದ ಅಗತ್ಯವಿದೆ- ಡಿ.ಕೆ. ಶಿವಕುಮಾರ್ ಯೂ-ಟರ್ನ್

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆಗಳಿದ್ದು, ಸೋಂಕಿತ ಸೂಕ್ತ ರೀತಿಯಲ್ಲಿ ನೋಡಿಕೊಳ್ಳಲಾಗುತ್ತಿಲ್ಲ ಎಂದು ಹೇಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದೀಗ ಯೂಟರ್ನ್ ಹೊಡೆದಿದ್ದು, ದೋಷ ಹುಡುಕುವುದಿಲ್ಲ, ಆರೋಪಗಳನ್ನೂ ಮಾಡುವುದಿಲ್ಲ. 
ಡಿಕೆ. ಶಿವಕುಮಾರ್
ಡಿಕೆ. ಶಿವಕುಮಾರ್

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆಗಳಿದ್ದು, ಸೋಂಕಿತ ಸೂಕ್ತ ರೀತಿಯಲ್ಲಿ ನೋಡಿಕೊಳ್ಳಲಾಗುತ್ತಿಲ್ಲ ಎಂದು ಹೇಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದೀಗ ಯೂಟರ್ನ್ ಹೊಡೆದಿದ್ದು, ದೋಷ ಹುಡುಕುವುದಿಲ್ಲ, ಆರೋಪಗಳನ್ನೂ ಮಾಡುವುದಿಲ್ಲ. ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ವೈದ್ಯರು ಹಾಗೂ ರೋಗಿಗಳಿಗೆ ನೈತಿಕ ಸ್ಥೈರ್ಯ ತುಂಬುವ ಅಗತ್ಯವಿದೆ ಎಂದು ಬುಧವಾರ ಹೇಳಿದ್ದಾರೆ. 

ನಿನ್ನೆಯಷ್ಟೇ ನಗರದ ಕೋವಿಡ್ ಚಿಕಿತ್ಸಾ ಕೇಂದ್ರವಾಗಿರುವ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದೇ ವೇಳೆ ವೈದ್ಯರು, ಆಸ್ಪತ್ರೆ, ಸಿಬ್ಬಂದಿ, ಕೊರೋನಾ ಸೋಂಕಿತರೊಂದಿಗೆ ಸಮಾಲೋಚನೆ ನಡೆಸಿ ಅವರಲ್ಲಿ ಆತ್ಮಸ್ಥೈರ್ಯ ತುಂಬಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಿಗಳೂ ಕೂಡ ಆಸ್ಪತ್ರೆಗಳಿಗೆ ಭೇಟಿ ನೀಡಿ ಸೋಂಕಿತರು ಮತ್ತು ಚಿಕಿತ್ಸೆ ನೀಡುತ್ತಿರುವವರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು. ಕೋವಿಡ್ ಸೋಂಕಿತರ ಬಗ್ಗೆ ತಪ್ಪು ಕಲ್ಪನೆ ಬೇಡ. ಚಿಕಿತ್ಸೆ ವ್ಯವಸ್ಥೆಯಲ್ಲಿ ಸಣ್ಣಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿ. ಅಕ್ರಮ ಕುರಿತು ಮಾತನಾಡುವುದಿಲ್ಲ, ಆರೋಪವನ್ನೂ ಇದೀಗ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. 

ಮಹಾಮಾರಿ ಕೊರೋನಾ ವಿರುದ್ಧ ಹೋರಾಟದಲ್ಲಿ ವೈದ್ಯರು, ಆಸ್ಪತ್ರೆ ಸಿಬ್ಬಂದಿ, ಪೊಲೀಸರು ಸೇರಿದಂತೆ ಎಲ್ಲಾ ಕೊರೋನಾ ವಾರಿಯರ್ಸ್ ಗಳು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಅವರ ಬೆನ್ನಿಗೆ ನಿಲ್ಲುವುದು, ಧೈರ್ಯ ತುಂಬುವುದು ನಮ್ಮ ಕರ್ತವ್ಯ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಆಸ್ಪತ್ರೆಯ ಸಿಬ್ಬಂದಿಗಳ ಜೊತೆಗೂ ಮಾತನಾಡಿದ ಅವರು, ಕೊರೋನಾ ಸಂಕಷ್ಟದಲ್ಲಿ ಮನೆ, ಕುಟುಂಬ ಪರಿವಾರದವರನ್ನು ಬಿಟ್ಟು, ತಮ್ಮ ಆರೋಗ್ಯ ಹಾಗೂ ಜೀವವನ್ನು ಲೆಕ್ಕಿಸದೇ ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿರುವ ಅವರ ಸೇವಾ ಮನೋಭಾವವನ್ನು ಶ್ಲಾಘಿಸಿದರು. 

ವಿಕ್ಟೋರಿಯಾ ನಂತರ ಬೆಂಗಳೂರು ವೈದ್ಯಕೀಯ ಕಾಲೇಜಿಗೂ ಭೇಟಿ ನೀಡಿದ ಅವರು, ವಿವಿಧ ಕೋವಿಡ್ ಚಿಕಿತ್ಸಾ ಕೇಂದ್ರಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊರೋನಾ ಸೋಂಕಿತರು, ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಜೊತೆಗೆ ಸಮಾಲೋಚನೆ ನಡೆಸಿ ನಿಮ್ಮೊಂದಿಗೆ ನಾವಿದ್ದೇವೆಂದು ಧೈರ್ಯ ತುಂಬಿದರು. 

ಡಿಕೆ.ಶಿವಕುಮಾರ್ ಅವರು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಈ ಹಿಂದೆ ನಾಲ್ಕು ತಿಂಗಳುಗಳಲ್ಲಿ 12 ಬಾರಿ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಹಿಂದೆ ಕೊರೋನಾ ಚಿಕಿತ್ಸಾ ವ್ಯವಸ್ಥೆಗಳ ಕುರಿತು ಸರ್ಕಾರವನ್ನು ವಿಪಕ್ಷಗಳು ಟೀಕೆ ಮಾಡಿತ್ತು. ಇದೀಗ ಅವರಿಗೇ ಸತ್ಯ ಗೊತ್ತಾಗಿದೆ. ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರೇ ಒಪ್ಪಿಕೊಂಡಿದ್ದಾರೆ. ವ್ಯವಸ್ಥೆಗಳು ಉತ್ತಮವಾಗಿವೆ ಎಂದಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com